
ಶಾಲಿನಿ ಪಾಂಡೆ
ಚಿತ್ರ: ಇನ್‌ಸ್ಟಾಗ್ರಾಂ
‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ಶಾಲಿನಿ ಪಾಂಡೆ ಬೋಲ್ಡ್ ಆಗಿ ಕಾಣಿಸಿಕೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ನಟಿ ಶಾಲಿನಿ ಅವರು ಟಾಪ್ ಲೆಸ್ ಫೋಟೊಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಇದೇ ಫೋಟೊಗಳನ್ನು ನೋಡಿದವರು ನಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಗೆಬಗೆಯಾಗಿ ಕಮೆಂಟ್ ಮಾಡುತ್ತಿದ್ದಾರೆ.
‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ನಟಿ ಶಾಲಿನಿ ಪಾಂಡೆ ಅವರು ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದರು. ಅದೇ ಪಾತ್ರದ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು.
ಆದರೆ ನಟಿ ಶಾಲಿನಿ ಪಾಂಡೆ ಅವರು ನಿಜ ಜೀವನದಲ್ಲಿ ಸಖತ್ ಬೋಲ್ಡ್ ಆಗಿದ್ದಾರೆ. ಇತ್ತೀಚೆಗೆ ಗ್ಲಾಮರಸ್ ಅವತಾರಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ಇತ್ತೀಚೆಗಷ್ಟೇ ನಟಿ ಪುಲ್ಕಿತ್ ಸಾಮ್ರಾಟ್ ಮತ್ತು ವರುಣ್ ಶರ್ಮಾ ನಟನೆಯ ‘ರಾಹು ಕೇತು’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗಂತೂ ಭಿನ್ನ ವಿಭಿನ್ನ ಪಾತ್ರಗಳನ್ನು ನಟಿ ಶಾಲಿನಿ ಆಯ್ಕೆ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.