ವಿಜಯ್ ದೇವರಕೊಂಡ ನಾಯಕನಾಗಿ ನಟಿಸುತ್ತಿರುವ,ಪುರಿ ಜಗನ್ನಾಥ್ ನಿರ್ದೇಶನದ ಹೊಸ ಚಿತ್ರದ ಹೆಸರು ‘ಫೈಟರ್’.
ಪುರಿ ಜಗನ್ನಾಥ್ ಅವರ ‘ಇಸ್ಮಾರ್ಟ್ ಶಂಕರ್’ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಹಿಟ್ ಆಗಿದೆ. ಆ ಚಿತ್ರದ ನಂತರ ಅವರು ಹೊಸ ಚಿತ್ರದ ತಯಾರಿಯಲ್ಲಿ ತೊಡಗಿದ್ದರು. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ನಟಿಸುತ್ತಿರುವ ಸುದ್ದಿ ಭಾರಿ ಕುತೂಹಲ ಮೂಡಿಸಿತ್ತು. ಈಗ ಆ ಚಿತ್ರದ ಹೆಸರು ಅಂತಿಮಗೊಂಡಿದ್ದು, ಸಹ ನಿರ್ಮಾಪಕಿ ಚಾರ್ಮಿ ಕೌರ್ ಅವರು ಚಿತ್ರದ ಹೆಸರನ್ನು ಬಹಿರಂಗಪಡಿಸಿದ್ದಾರೆ.
2020ರ ಜನವರಿಯಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರತಂಡ ಸಿನಿಮಾದ ತಯಾರಿಯಲ್ಲಿ ತೊಡಗಿದೆ. ಈ ಚಿತ್ರದಲ್ಲಿ ವಿಜಯ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಈ ಚಿತ್ರದ ಪಾತ್ರಕ್ಕಾಗಿ ಅವರು ಸಿಕ್ಸ್ಪ್ಯಾಕ್ ಮಾಡಿಕೊಳ್ಳುವ ತಯಾರಿಯಲ್ಲಿದ್ದಾರೆ.ಈ ಸಿನಿಮಾದಲ್ಲಿ ನಾಯಕಿಯಾಗಿ ಬಾಲಿವುಡ್ ನಟಿ ಜಾಹ್ನವಿ ಕಪೂರ್ ನಟಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಪುರಿ ಟೂರಿಂಗ್ ಟಾಕೀಸ್ ಹಾಗೂ ಪುರಿ ಕನೆಕ್ಟ್ಸ್ ಬ್ಯಾನರ್ ಅಡಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಸದ್ಯದಲ್ಲೇ ಘೋಷಣೆ ಮಾಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.