ADVERTISEMENT

ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಸಲು ಆದೇಶ

ಏ.15ರೊಳಗೆ ಚುನಾವಣೆ ನಡೆಸಲು ನೋಂದಣಾಧಿಕಾರಿ ಆದೇಶ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 20:40 IST
Last Updated 9 ಮಾರ್ಚ್ 2022, 20:40 IST
   

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿ ಚುನಾವಣೆ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಿ, 2022ರ ಏ.15ರೊಳಗಾಗಿ ಚುನಾವಣೆ ನಡೆಸುವಂತೆ ಬೆಂಗಳೂರು ನಗರ ಜಿಲ್ಲೆ 4ನೇ ವಲಯದ ಸಂಘಗಳ ಜಿಲ್ಲಾ ನೋಂದಣಾಧಿಕಾರಿಯಾದ ಎಸ್‌.ಜಿ. ಮಂಜುನಾಥ ಸಿಂಗ್‌ ಆದೇಶಿಸಿದ್ದಾರೆ.

ಈ ಕುರಿತು ಮಂಡಳಿ ಅಧ್ಯಕ್ಷರಿಗೆ ಮಂಜುನಾಥ ಸಿಂಗ್ ಆದೇಶ ಪ್ರತಿ ರವಾನಿಸಿದ್ದಾರೆ. ಚುನಾವಣೆ ನಡೆಸದೇ ಇದ್ದಲ್ಲಿ, ಈಗಾಗಲೇ ಸಮಿತಿಯ ಅವಧಿ ಮುಗಿದಿರುವ ಕಾರಣ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಲಭ್ಯವಿರುವ ಮತದಾರರ ಪಟ್ಟಿಯನ್ವಯ ಕೂಡಲೇ ಚುನಾವಣೆ ನಡೆಸಲು ಸೂಚಿಸಲಾಗಿದ್ದು, ತಕ್ಷಣವೇ ಈ ಕುರಿತು ವರದಿ ಸಲ್ಲಿಸಲೂ ಆದೇಶಿಸಲಾಗಿದೆ.

ಚಲನಚಿತ್ರ ವಾಣಿಜ್ಯ ಮಂಡಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿ ಮಂಡಳಿಯ 50 ಸದಸ್ಯರು
ಜಿಲ್ಲಾ ನೋಂದಣಾಧಿಕಾರಿಗೆಫೆಬ್ರುವರಿಯಲ್ಲಿ ಮನವಿ ಪತ್ರ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.