ವಿಕ್ಕಿ ವರುಣ್, ಧನ್ಯ ರಾಮಕುಮಾರ್ ಜೋಡಿಯಾಗಿ ನಟಿಸಿರುವ ‘ಕಾಲಾಪತ್ಥರ್’ ಚಿತ್ರ ಸೆ.13ಕ್ಕೆ ತೆರೆಗೆ ಬರಲಿದೆ. ಚಿತ್ರದ ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ.
ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ಚಿತ್ರವನ್ನು ನಿರ್ಮಿಸಿದ್ದು, ವಿಕ್ಕಿ ವರುಣ್ ನಟನೆ ಜೊತೆಗೆ ಚಿತ್ರದ ನಿರ್ದೇಶನವನ್ನು ಮಾಡಿದ್ದಾರೆ. ‘ನಾನು ಕನ್ನಡ ಚಿತ್ರರಂಗಕ್ಕೆ ಬಂದು ಹದಿನೈದು ವರ್ಷಗಳಾಯಿತು. ಸೂರಿ ಅವರ ನಿರ್ದೇಶನದಲ್ಲಿ ನಾನು ನಾಯಕನಾಗಿ ನಟಿಸಿದ್ದ ‘ಕೆಂಡಸಂಪಿಗೆ’ ಚಿತ್ರ ಸೆಪ್ಟೆಂಬರ್‌ನಲ್ಲಿ ತೆರೆಕಂಡಿತ್ತು. ನನ್ನ ನಿರ್ದೇಶನದ ‘ಕಾಲಾಪತ್ಥರ್’ ಚಿತ್ರ ಕೂಡ ಸೆಪ್ಟೆಂಬರ್‌ನಲ್ಲೇ ಬಿಡುಗಡೆಯಾಗುತ್ತಿರುವುದು ಖುಷಿಯ ವಿಷಯ’ ಎಂದರು ವಿಕ್ಕಿ ವರುಣ್.
ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಐದು ಹಾಡುಗಳು ‘ಸೌಂಡ್ಸ್ ಆಫ್ ಕಾಲಾಪತ್ಥರ್’ ಗುಚ್ಛದಲ್ಲಿವೆ. ಹಾಡುಗಳನ್ನು ವಿ.ನಾಗೇಂದ್ರ ಪ್ರಸಾದ್ ಹಾಗೂ ಪ್ರಮೋದ್ ಮರವಂತೆ ರಚಿಸಿದ್ದಾರೆ. ಸಂದೀಪ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.