ADVERTISEMENT

ಸಿನಿ ಸುದ್ದಿ | ‘ಬಂಡೆ ಸಾಹೇಬ’ನಿಗೆ ನಟ ಶರಣ್‌ ಸಾಥ್‌

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 0:20 IST
Last Updated 11 ಏಪ್ರಿಲ್ 2025, 0:20 IST
ಕಾವ್ಯ ಭಾರದ್ವಾಜ್
ಕಾವ್ಯ ಭಾರದ್ವಾಜ್   

ಕೆಲ ವರ್ಷಗಳ ಹಿಂದೆ ಕಲಬುರಗಿಯಲ್ಲಿ ಶೂಟೌಟ್‌ಗೆ ಬಲಿಯಾದ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ ‘ಬಂಡೆ ಸಾಹೇಬ್’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಗೊಂಡಿದೆ. ನಟ ಶರಣ್ ಚಿತ್ರದ ಟೀಸರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

‘ಈ ಕಥೆಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಮೊದಲು ತಂಡಕ್ಕೆ ಅಭಿನಂದನೆ ಸಲ್ಲಿಸಬೇಕು. ಟೀಸರ್‌ ಉತ್ತಮವಾಗಿದೆ. ನಾಯಕ ನಟ ಸಂತೋಷ್ ರಾಮ್ ಅವರ ನಟನೆ ಕೂಡ ಚೆನ್ನಾಗಿದೆ. ಚಿತ್ರವನ್ನು ತೆರೆಯ ಮೇಲೆ ನೋಡಲು ಕಾತುರನಾಗಿದ್ದೇನೆ’ ಎಂದರು ಶರಣ್‌.

ಚಿನ್ಮಯ್ ರಾಮ್ ಚಿತ್ರದ ನಿರ್ದೇಶಕ. ಗೋಪ್ಪಣ್ಣ ದೊಡ್ಮನಿ ಬಂಡವಾಳ ಹೂಡಿದ್ದಾರೆ.  ‘ನಿರ್ಮಾಪಕರು ನನ್ನ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ನೈಜಘಟನೆ ಆಧಾರಿತ ಚಿತ್ರವನ್ನು ನಿರ್ದೇಶಿಸುವುದು ಸುಲಭವಲ್ಲ ಎನಿಸಿತು. ನಂತರ‌ ಕಥೆ ಇಷ್ಟವಾಗಿ ನಿರ್ದೇಶನಕ್ಕೆ ಮುಂದಾದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಚಿತ್ರೀಕರಣ‌ ಹಾಗೂ ಪೋಸ್ಟ್‌ ಪ್ರೊಡಕ್ಷನ್‌ ಮುಗಿದಿದ್ದು, ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ ಎಂದರು’ ನಿರ್ದೇಶಕರು.

ADVERTISEMENT

ಕಾವ್ಯ ಭಾರದ್ವಾಜ್ ಚಿತ್ರದ ನಾಯಕಿ. ಮುಂಜಾನೆ ಮಂಜು ಛಾಯಾಚಿತ್ರಗ್ರಹಣ, ಎಂ.ಎಸ್. ತ್ಯಾಗರಾಜ್ ಸಂಗೀತ, ಶೇಷಾಚಲ ಸಂಕಲನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.