‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕೆ.ರಾಮನಾರಾಯಣ್ ನಿರ್ದೇಶನದ ಚಿತ್ರ ಮೇ 23ಕ್ಕೆ ತೆರೆ ಕಾಣಲಿದೆ.
ಮನೋಮೂರ್ತಿ ಸಂಗೀತ ಸಂಯೋಜಿಸಿದ್ದು, ಚೇತನ್ ಹಾಡಿದ್ದಾರೆ. ‘ಈ ಗೀತೆಯಲ್ಲಿ ಯೋಗರಾಜ್ ಭಟ್ ಅಭಿನಯಿಸಿದ್ದಾರೆ. ಅವರೇ ಈ ಗೀತೆಗೆ ಸಾಹಿತ್ಯ ಬರೆಯಬೇಕಾಗಿತ್ತು. ಕಾರಣಾಂತರಗಳಿಂದ ನಾನು ಬರೆಯುವಂತೆ ಆಯಿತು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ’ ಎಂದರು ನಿರ್ದೇಶಕರು.
ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರಕ್ಕೆ ಪರ್ಲ್ ಸಿನಿ ಕ್ರಿಯೇಷನ್ಸ್ ಬಂಡವಾಳ ಹೂಡಿದೆ. ಮೌನ ಗುಡ್ಡೆಮನೆ ಚಿತ್ರದ ನಾಯಕಿ. ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಮೌನ ಗುಡ್ಡೆಮನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.