ರಂಗಭೂಮಿಯಲ್ಲಿ ಕೆಲಸ ಮಾಡಿ ಅನುಭವ ಗಳಿಸಿರುವ ಒಂದಿಷ್ಟು ಯುವಕತರೆಲ್ಲ ಒಟ್ಟಾಗಿ ಸಿದ್ಧಪಡಿಸಿರುವ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರದ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕರದಾಯಾಮ ಸ್ಟುಡಿಯೋಸ್ ಸಂಸ್ಥೆಯಡಿ ಚಿಂತನ್ ಕಂಬಣ್ಣ ನಿರ್ಮಿಸಿದರೆ, ಸುಂದರ್ ಎಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
‘ಇದೊಂದು ಕ್ರೈಮ್ ಜಾನರ್ ಕುರಿತಾದ ಚಿತ್ರ. ತನಿಖೆಯೊಂದರ ಸುತ್ತ ನಡೆಯುವ ಕಥೆ. ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಸಾಗುವ ಕಥೆ ಸಾಕಷ್ಟು ತಿರುವುಗಳನ್ನು ಪಡೆಯುತ್ತಾ ಹೋಗುತ್ತದೆ. ಮುಂದೆ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುತ್ತಾರೆ ನಿರ್ದೇಶಕರು.
ಮಹಿನ್ ಕುಬೇರ್, ಮುತ್ತುರಾಜ್ ಟಿ, ನಟ ಗಗನ್, ಚಿಂತನ್ ಕಂಬಣ್ಣ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರು ಮತ್ತು ಕನಕಪುರದಲ್ಲಿ ಚಿತ್ರೀಕರಣವಾಗಿದೆ.
ಚಿತ್ರಕ್ಕೆ ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್ ಛಾಯಾಚಿತ್ರಗ್ರಹಣ, ನಾನಿ ಕೃಷ್ಣ ಸಂಕಲನ ಮತ್ತು ಶಿವೋಂ ಸಂಗೀತವಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೊನೆಯ ಹಂತದಲ್ಲಿದ್ದು, ಆಗಸ್ಟ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.