ADVERTISEMENT

ವೈದ್ಯರಿಗೆ ₹30 ಕೋಟಿ ವಂಚನೆ: ಪ್ರಸಿದ್ಧ ಚಲನಚಿತ್ರ ನಿರ್ಮಾಪಕ, ಪತ್ನಿ ಬಂಧನ

ಪಿಟಿಐ
Published 7 ಡಿಸೆಂಬರ್ 2025, 16:20 IST
Last Updated 7 ಡಿಸೆಂಬರ್ 2025, 16:20 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಮುಂಬೈ: ರಾಜಸ್ಥಾನದಲ್ಲಿ ದಾಖಲಾಗಿರುವ ₹30 ಕೋಟಿ ವಂಚನೆ ಪ್ರಕರಣದಲ್ಲಿ ಉದಯಪುರ ಪೊಲೀಸರು ಭಾನುವಾರ ಜನಪ್ರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ವಿಕ್ರಮ್ ಭಟ್ ಮತ್ತು ಅವರ ಪತ್ನಿಯನ್ನು ಮುಂಬೈನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ರಾಜಸ್ಥಾನ ಪೊಲೀಸರು ಸೋಮವಾರ ಬಾಂದ್ರಾ ನ್ಯಾಯಾಲಯದಲ್ಲಿ ಟ್ರಾನ್ಸಿಟ್ ರಿಮಾಂಡ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಭಟ್, ಅವರ ಪತ್ನಿ ಶ್ವೇತಾಂಬರಿ ಭಟ್ ಮತ್ತು ಇತರ ಆರು ಮಂದಿ, ಇಂದಿರಾ ಗ್ರೂಪ್ ಆಫ್ ಕಂಪನಿಗಳ ಸಂಸ್ಥಾಪಕ ಉದಯಪುರ ಮೂಲದ ಡಾ. ಅಜಯ್ ಮುರ್ದಿಯಾ ಅವರಿಗೆ ₹30 ಕೋಟಿ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಉದಯಪುರ ಪೊಲೀಸರ ತಂಡವು ಭಾನುವಾರ ವಿಕ್ರಮ್ ಭಟ್ ಮತ್ತು ಶ್ವೇತಾಂಬರಿ ಅವರನ್ನು ಬಂಧಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಇಂದಿರಾ ಐವಿಎಫ್ ಆಸ್ಪತ್ರೆಯ ಮಾಲೀಕರಾದ ಮುರ್ದಿಯಾ, ತಮ್ಮ ದಿವಂಗತ ಪತ್ನಿಯ ಜೀವನ ಚರಿತ್ರೆ ಆಧರಿಸಿ ಸಿನಿಮಾ ಮಾಡಲು ಬಯಸಿದ್ದರು. ಈ ಚಿತ್ರದ ಮೂಲಕ ₹200 ಕೋಟಿ ಗಳಿಕೆಯ ಭರವಸೆಯನ್ನೂ ನಿರ್ಮಾಪಕರು ನೀಡಿದ್ದರು. ಆದರೆ, ಚಿತ್ರ ಸೆಟ್ಟೇರಲೇ ಇಲ್ಲ. ನಂತರ, ಮುರ್ದಿಯಾ ಉದಯಪುರದ ಭೋಪಾಲ್‌ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ವಂಚನೆ ಮತ್ತು ಇತರ ಅಪರಾಧಗಳ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ’ಎಂದು ಅಧಿಕಾರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.