ADVERTISEMENT

ನಿರ್ದೇಶಕ ನಿಶಿಕಾಂತ್ ಕಾಮತ್‌ ನಿಧನ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 12:35 IST
Last Updated 17 ಆಗಸ್ಟ್ 2020, 12:35 IST
   

ಮುಂಬೈ:'ಮುಂಬೈ ಮೇರಿ ಜಾನ್', 'ದೃಶ್ಯಂ', 'ಮದಾರಿ' ಮೊದಲಾದ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದನಿಶಿಕಾಂತ್ ಕಾಮತ್ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜುಲೈ 31 ರಂದು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆಲ ದಾಖಲಾಗಿ ಚಿಕಿತ್ಸೆಯಲ್ಲಿದ್ದರು.

2005ರಲ್ಲಿ ಮರಾಠಿಯ ‘ದೊಂಬಿವಾಲಿ ಫಾಸ್ಟ್‌’ ಸಿನಿಮಾದ ಮೂಲಕ ನಿಶಿಕಾಂತ್ ನಿರ್ದೇಶನದ ಹಾದಿ ಹಿಡಿದಿದ್ದರು.2004ರ ‘ಹವಾ ಆನೇದೇ’ ಇವರ ನಟನೆಯ ಚೊಚ್ಚಲ ಸಿನಿಮಾ. 2008ರ ‘ಮುಂಬೈ ಮೇರಿ ಜಾನ್’ ಸಿನಿಮಾದ ಮೂಲಕ ನಟ–ನಿರ್ದೇಶಕನಾಗಿ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದರು. ’ದೊಂಬಿವಾಲಿ ಫಾಸ್ಟ್‌’, ‘ಮುಂಬೈ ಮೇರಿ ಜಾನ್‌’, ‘ರಾಕಿ ಹ್ಯಾಂಡ್‌ಸಮ್‌’, ‘ಫೋರ್ಸ್‌’, ‘ಮದಾರಿ’, ‘ದೃಶ್ಯಂ’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ADVERTISEMENT

‘ಡ್ಯಾಡಿ’, ‘ರಾಕಿ ಹ್ಯಾಂಡ್‌ಸಮ್‌’, ‘ಜ್ಯೂಲಿ 2‘ ಹಾಗೂ ‘ಭಾವೇಶ್ ಜೋಶಿ’ ಸಿನಿಮಾಗಳಲ್ಲಿ ತಮ್ಮ ನಟನಾ ಚಾತುರ್ಯವನ್ನು ತೋರಿದ್ದರು ನಿಶಿಕಾಂತ್. ಸಿನಿಮಾಗಳಿಗೆ ಮಾತ್ರ ತಮ್ಮನ್ನು ಸೀಮಿತವಾಗಿರಿಸಿಕೊಳ್ಳದ ಇವರು ವೆಬ್‌ ಸರಣಿಗಳನ್ನು ನಿರ್ಮಾಣ ಮಾಡಿದ್ದರು. ’ದಿ ಫೈನಲ್ ಕಾಲ್’ ಹಾಗೂ ’ರಂಗ್‌ಬಾಝ್ ಫಿರ್‌ಸೇ’ ಇವರು ನಿರ್ಮಾಣ ಮಾಡಿದ ವೆಬ್‌ಸರಣಿಗಳು.

ನಿಶಿಕಾಂತ್ ನಿಧನಕ್ಕೆ ಕಲಾವಿದರ ಸಂತಾಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.