ADVERTISEMENT

ಆಂಧ್ರ CM ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌:ರಾಮ್‌ಗೋಪಾಲ್‌ ವರ್ಮಾ ವಿಚಾರಣೆಗೆ ಹಾಜರು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2025, 10:39 IST
Last Updated 7 ಫೆಬ್ರುವರಿ 2025, 10:39 IST
ರಾಮ್‌ಗೋಪಾಲ್‌ ವರ್ಮಾ
ರಾಮ್‌ಗೋಪಾಲ್‌ ವರ್ಮಾ   

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸೇರಿದಂತೆ ಇತರರ ಭಾವಚಿತ್ರಗಳನ್ನು ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಅವರು ಇಂದು (ಶುಕ್ರವಾರ) ವಿಚಾರಣೆಗೆ ಹಾಜರಾದರು.

ವರ್ಮಾ ಅವರು ವಿಚಾರಣೆಗಾಗಿ ಓಂಗೋಲ್ ಗ್ರಾಮೀಣ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಯ್ಡು ಮತ್ತು ಪವನ್ ಕಲ್ಯಾಣ್ ಸೇರಿದಂತೆ ಅವರ ಕುಟುಂಬ ಸದಸ್ಯರ ಭಾವಚಿತ್ರಗಳನ್ನು ತಿರುಚಿ ಆಕ್ಷೇಪಾರ್ಹ ಪೋಸ್ಟ್‌ ಮಾಡಲಾಗಿದೆ. ಈ ಸಂಬಂಧ ವರ್ಮಾ ವಿರುದ್ಧ ಅನೇಕ ಪ್ರಕರಣಗಳು ದಾಖಲಾಗಿವೆ. ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆಯೇ ನೋಟಿಸ್‌ ನೀಡಲಾಗಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಈ ಪ್ರಕರಣ ಸಂಬಂಧ ಹೆ‌ಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೇ ಪ್ರಕರಣ ಸಂಬಂಧ ಈ ಹಿಂದೆ ವರ್ಮಾ ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.