ADVERTISEMENT

ಬೆಂಗಳೂರಿನಲ್ಲಿ ಕಾಂತಾರ ಚಿತ್ರ ವೀಕ್ಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂತಾರ ಚಲನಚಿತ್ರ ವೀಕ್ಷಿಸಿ ಸಂಭ್ರಮಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2022, 4:50 IST
Last Updated 3 ನವೆಂಬರ್ 2022, 4:50 IST
ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂತಾರ ಚಲನಚಿತ್ರ ವೀಕ್ಷಿಸಿದ್ದಾರೆ.
ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂತಾರ ಚಲನಚಿತ್ರ ವೀಕ್ಷಿಸಿದ್ದಾರೆ.   

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ‘ಕಾಂತಾರ‘ ಚಿತ್ರವನ್ನು ವೀಕ್ಷಿಸಿದ್ದಾರೆ.

ಚಿತ್ರ ವೀಕ್ಷಿಸಿದ ಬಳಿಕ ಅವರು ಟ್ವೀಟ್ ಮಾಡಿದ್ದು, ತಂಡಕ್ಕೆ ಶುಭ ಕೋರಿದ್ದಾರೆ.

ರಿಷಬ್ ಶೆಟ್ಟಿಯವರ ನಿರ್ದೇಶನದಲ್ಲಿ ಮೂಡಿಬಂದ ಕಾಂತಾರ ಚಿತ್ರವನ್ನು ವೀಕ್ಷಿಸಿದೆ. ಈ ಚಿತ್ರ ತುಳುವನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಯನ್ನು ತುಂಬಾ ಚೆನ್ನಾಗಿ ಪ್ರಸ್ತುತಪಡಿಸಿದೆ ಎಂದು ಸಚಿವರು ಶ್ಲಾಘಿಸಿದ್ದಾರೆ.

ADVERTISEMENT

ಬೆಂಗಳೂರಿನ ಅಶೋಕನಗರದ ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಸಚಿವರು ಚಿತ್ರ ವೀಕ್ಷಿಸಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ‘ ಚಿತ್ರ 30 ದಿನಗಳನ್ನು ಪೂರೈಸಿ, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.