ಪ್ರಥಮ್ ಅಭಿನಯದ ‘ಫಸ್ಟ್ ನೈಟ್ ವಿತ್ ದೆವ್ವ’ ಚಿತ್ರದ ‘ತುಂಟ ಮನದ ಮಾಯೆ ನೀನು’ ಎಂಬ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ ಚಿತ್ರವಿದು.
ಅದ್ವಿಕ್ ವರ್ಮ ಸಂಗೀತ ನಿರ್ದೇಶನದ ಈ ಹಾಡಿಗೆ ರಿಚ್ಚಿ ಧ್ವನಿಯಾಗಿದ್ದಾರೆ. ‘ಮನರಂಜನೆ ಜತೆಗೆ ಹಾರರ್ ಕಥಾಹಂದರ ಹೊಂದಿರುವ ಚಿತ್ರವಿದು. ಸೆನ್ಸಾರ್ ಆಗಿದ್ದು, ನಮ್ಮ ಚಿತ್ರ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ನಾನೇ ಈ ಚಿತ್ರಕ್ಕೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದೇನೆ’ ಎಂದರು ಪ್ರಥಮ್.
ನಿಖಿತಾ ಸ್ವಾಮಿ ನಾಯಕಿ. ಸುಶ್ಮಿತಾ, ಹರೀಶ್ ರಾಜ್, ಶ್ರೀನಿವಾಸಮೂರ್ತಿ, ರಮೇಶ್ ಭಟ್, ತುಕಾಲಿ ಸಂತೋಷ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
‘ನಾನು ಛಾಯಾಗ್ರಾಹಕನಾಗಿ ಬಹಳ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಈ ಚಿತ್ರಕ್ಕೂ ನಾನೇ ಛಾಯಾಚಿತ್ರಗ್ರಹಣದ ಜತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. ನನ್ನ ನಿರ್ದೇಶನದ ಐದನೇ ಚಿತ್ರ’ ಎಂದು ನಿರ್ದೇಶಕ ಪಿ.ವಿ.ಆರ್ ಸ್ವಾಮಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.