ADVERTISEMENT

ಸುಧೀಂದ್ರ ವೆಂಕಟೇಶ್ ನಿರ್ಮಾಣದ ‘ಫಸ್ಟ್‌ ಸ್ಯಾಲರಿ’ಗೆ ಶ್ರುತಿ ಸಾಥ್‌

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 0:03 IST
Last Updated 6 ಡಿಸೆಂಬರ್ 2025, 0:03 IST
‘ಫಸ್ಟ್‌ ಸ್ಯಾಲರಿ’ ತಂಡದೊಂದಿಗೆ ಶ್ರುತಿ ಹಾಗೂ ರಾಕ್‌ಲೈನ್‌ ವೆಂಕಟೇಶ್‌ 
‘ಫಸ್ಟ್‌ ಸ್ಯಾಲರಿ’ ತಂಡದೊಂದಿಗೆ ಶ್ರುತಿ ಹಾಗೂ ರಾಕ್‌ಲೈನ್‌ ವೆಂಕಟೇಶ್‌    

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ ‘ಫಸ್ಟ್‌ ಸ್ಯಾಲರಿ’ ಕಿರುಚಿತ್ರ ಇತ್ತೀಚೆಗೆ ಬಿಡುಗಡೆಯಾಯಿತು. ನಟಿ ಶ್ರುತಿ ಹಾಗೂ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಚಿತ್ರದ ಪ್ರದರ್ಶನ ನಡೆಯಿತು. 

ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರುತಿ, ‘ನಾನು ಡಿ.ವಿ.ಸುಧೀಂದ್ರ ಅವರ ನಿರ್ಮಾಣದ ‘ನಗುನಗುತಾ ನಲಿ’ ಚಿತ್ರದಲ್ಲಿ ಅಭಿನಯಿಸಿದ್ದೆ. ಇಂದು ಅವರ ಕುಟುಂಬದ ಪವನ್ ವೆಂಕಟೇಶ್ ಕಿರುಚಿತ್ರ ನಿರ್ಮಾಣ ಮಾಡಿದ್ದಾನೆ. ತಾಯಿ-ಮಗನ ಭಾವನಾತ್ಮಕ ಸನ್ನಿವೇಶಗಳು ಮನಸ್ಸಿಗೆ ಬಹಳ ಹತ್ತಿರವಾಯಿತು, ಕಣ್ಣಂಚಲಿ ನೀರು ತರಿಸಿತು’ ಎನ್ನುತ್ತಾ ‘ನನ್ನ ಮೊದಲ ವೇತನ ಐನೂರು ರೂಪಾಯಿಯಿತ್ತು’ ಎಂದು ನೆನಪಿಸಿಕೊಂಡರು. 

‘ನನ್ನ ಚಿಕ್ಕಪ್ಪ ಡಿ.ವಿ.ಸುಧೀಂದ್ರ ಅವರು ಪಾಲುದಾರಿಕೆಯಲ್ಲಿ ಆರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಈಗ ನಾನು ಮೊದಲ ಬಾರಿಗೆ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಮಗ ಪವನ್ ಹಾಗೂ ಸ್ನೇಹಿತರು ಒಂದೊಳ್ಳೆ ಕಿರುಚಿತ್ರ ಮಾಡುತ್ತಿದ್ದೇವೆ ಎಂದು ಹೇಳಿದಾಗ ನಾನು ಅವರ ಜೊತೆಗೆ ನಿಂತೆ’ ಎಂದರು ಸುಧೀಂದ್ರ ವೆಂಕಟೇಶ್.

ADVERTISEMENT

‘ನನ್ನ ಗೆಳೆಯ ವಿಜಯ್ ಶಿವಕುಮಾರ್ ಅವರು ಬರೆದ ಕಥೆ ಇದಾಗಿದೆ. ಅವರೇ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ, ರಕ್ಷಿತ್ ಇದರಲ್ಲಿ ನಟಿಸಿದ್ದಾರೆ. ನಾನು ನಿರ್ದೇಶಕನಾಗುವ ಕನಸನ್ನು ನನ್ನ ತಂದೆ ಸುಧೀಂದ್ರ ವೆಂಕಟೇಶ್ ಅವರು ಈ ಕಿರುಚಿತ್ರವನ್ನು ನಿರ್ಮಾಣ ಮಾಡುವ ಮೂಲಕ ನನಸು ಮಾಡಿದ್ದಾರೆ’ ಎನ್ನುತ್ತಾರೆ ಪವನ್ ವೆಂಕಟೇಶ್. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.