ADVERTISEMENT

ಪ್ರೇಮಿಗಳ ದಿನ: ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಚಿತ್ರದ ಹಾಡು ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಫೆಬ್ರುವರಿ 2022, 6:07 IST
Last Updated 8 ಫೆಬ್ರುವರಿ 2022, 6:07 IST
‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್‌ ಬಾಬು ಮತ್ತು ಕೀರ್ತಿ ಸುರೇಶ್ (ಮೈತ್ರಿ ಮೂವಿ ಮೇಕರ್ಸ್ ಟ್ವಿಟರ್ ಚಿತ್ರ)
‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್‌ ಬಾಬು ಮತ್ತು ಕೀರ್ತಿ ಸುರೇಶ್ (ಮೈತ್ರಿ ಮೂವಿ ಮೇಕರ್ಸ್ ಟ್ವಿಟರ್ ಚಿತ್ರ)   

ಹೈದರಾಬಾದ್: ಫೆಬ್ರುವರಿ 14 ಪ್ರೇಮಿಗಳ ದಿನದಂದು ನಟ ಮಹೇಶ್‌ ಬಾಬು ಅಭಿನಯದ ಬಹುನಿರೀಕ್ಷಿತ ‘ಸರ್ಕಾರು ವಾರಿ ಪಾಟ’ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಲಿದೆ.

‘ಕಲಾವತಿ’ ಹಾಡಿನ ಶೀರ್ಷಿಕೆಯಾಗಿದ್ದು, ಇದು ನಟಿ ಕೀರ್ತಿ ಸುರೇಶ್ ಅವರ ಪಾತ್ರದ ಹೆಸರು ಎಂದು ಹೇಳಲಾಗಿದೆ. ಕೀರ್ತಿ ಸುರೇಶ್ ಇದೇ ಮೊದಲ ಬಾರಿಗೆ ಮಹೇಶ್ ಬಾಬು ಅವರೊಂದಿಗೆ ನಟಿಸುತ್ತಿದ್ದಾರೆ.

‘ಕಲಾವತಿ’ ಹಾಡು ಥಮನ್‌ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿದೆ. ‘ಅಲಾ ವೈಕುಂಠಪುರಮುಲೋ’ ಹಾಡು ಥಮನ್‌ಗೆ ಹೆಚ್ಚು ಖ್ಯಾತಿ ತಂದುಕೊಟ್ಟಿತ್ತು.

ADVERTISEMENT

ಪರಶುರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಸರ್ಕಾರು ವಾರಿ ಪಾಟ’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತದಲ್ಲಿದ್ದು, ಮೇ 12ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.

ಮೈತ್ರಿ ಮೂವಿ ಮೇಕರ್ಸ್, ಜಿಎಂಬಿ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ ಅಡಿಯಲ್ಲಿ ಈ ಚಿತ್ರ ನಿರ್ಮಾಣ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.