ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಫಾರೆಸ್ಟ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.
ಎನ್.ಎಂ.ಕೆ ಸಿನಿಮಾಸ್ ಲಾಂಛನದಲ್ಲಿ ಎನ್.ಎಂ. ಕಾಂತರಾಜ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಚಂದ್ರಮೋಹನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ ‘ಓಡೋ ಓಡೋ’ ಎಂಬ ಹಾಡು ಬಿಡುಗಡೆಯಾಯಿತು. ಕೈಲಾಶ್ ಖೇರ್ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಕಾಡು ಪ್ರದೇಶ ಹಾಗೂ ಬೆಂಗಳೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ ಈ ಚಿತ್ರದ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಬರೆದಿದ್ದಾರೆ. ರವಿಕುಮಾರ್ ಛಾಯಾಚಿತ್ರಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.