
45 ಸಿನಿಮಾ ಪೋಸ್ಟರ್
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಇದೇ ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ಬಿಡುಗಡೆಯಾಗಲಿದೆ.
ಈಗಾಗಲೇ 45 ಸಿನಿಮಾ ಟ್ರೇಲರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಟ್ರೇಲರ್ ಬಿಡುಗಡೆಯಾಗಿ 48 ಗಂಟೆಯ ಒಳಗೆ ಬರೋಬ್ಬರಿ 2.5 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿತ್ತು. ಈ ಸಿನಿಮಾ ಭಾರತ ಮಾತ್ರವಲ್ಲದೆ, ಕೆನಾಡದಲ್ಲೂ ಹವಾ ಸೃಷ್ಟಿಸಿದೆ.
ಕೆನಾಡದಲ್ಲಿ ಶೋ ಬುಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿದೆ. ಹೀಗಾಗಿ 45 ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಳ್ಳಲು ಕೆನಡಾದಲ್ಲಿರುವ ಕನ್ನಡಿಗರು ಕಾತರದಿಂದ ಕಾಯುತ್ತಿದ್ದಾರೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಇದಾಗಿದ್ದು, ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.