ADVERTISEMENT

‘45’ ಸಿನಿಮಾ ಟ್ರೇಲರ್‌ ಬಿಡುಗಡೆ: ಒಂದು ಗಂಟೆಯಲ್ಲಿ ವೀಕ್ಷಣೆಯಾಗಿದಿಷ್ಟು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಡಿಸೆಂಬರ್ 2025, 16:09 IST
Last Updated 15 ಡಿಸೆಂಬರ್ 2025, 16:09 IST
   

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್‌, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ‘45’ ಚಿತ್ರದ ಕನ್ನಡ ಟ್ರೇಲರ್‌ ಬಿಡುಗಡೆಯಾದ ಒಂದೇ ಗಂಟೆಯಲ್ಲಿ 1.5 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

ಆನಂದ್‌ ಆಡಿಯೋಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಸಿನಿಮಾದ ಟ್ರೇಲರ್‌ ಕನ್ನಡ, ತೆಲುಗು, ತಮಿಳು, ಮಲಯಾಳ, ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಟ್ರೇಲರ್‌ನಲ್ಲಿ ಶಿವರಾಜ್‌ಕುಮಾರ್‌ ಭಿನ್ನ ರೂಪಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೇಕಿಂಗ್‌ ಹಾಗೂ ಪಾತ್ರಗಳು ಸಿನಿಮಾದ ಕುರಿತು ಕುತೂಹಲ ಹುಟ್ಟಿಸುವಂತಿದೆ.

ADVERTISEMENT

ಡಿ.15ರಂದು ಏಕಕಾಲಕ್ಕೆ ರಾಜ್ಯದ ಏಳು ಜಿಲ್ಲೆಯಲ್ಲಿ 45 ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಸೂರಜ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ‘45’ ಸಿನಿಮಾ ನಿರ್ಮಾಣವಾಗಿದ್ದು, ಸೆನ್ಸಾರ್‌ ಮಂಡಳಿಯು ‘ಯು/ಎ’ ಪ್ರಮಾಣ ಪತ್ರ ನೀಡಿದೆ.

ಕ್ರಿಸ್‌ಮಸ್ ಪ್ರಯುಕ್ತ ಡಿಸೆಂಬರ್ 25ರಂದು ಚಿತ್ರ ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆಗೂ ಮುನ್ನವೇ ‘ಜೀ’ ಸಂಸ್ಥೆಯು ಸಿನಿಮಾದ ಡಿಜಿಟಲ್‌ ಹಾಗೂ ಸ್ಯಾಟಲೈಟ್‌ ಹಕ್ಕುಗಳನ್ನು ಖರೀದಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.