ADVERTISEMENT

‘45’ ಚಿತ್ರದ ಟ್ರೇಲರ್ ಬಿಡುಗಡೆ : ಹೆಜ್ಜೆ ಹಾಕಿದ ಶಿವಣ್ಣ, ಉಪೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಡಿಸೆಂಬರ್ 2025, 5:53 IST
Last Updated 16 ಡಿಸೆಂಬರ್ 2025, 5:53 IST
   

‘45’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇಳೆ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಅವರು ವೇದಿಕೆ ಮೇಲೆ ನೃತ್ಯ ಮಾಡಿ ಗಮನ ಸೆಳೆದಿದ್ದಾರೆ. ಮೂವರು ತಾರಾ ನಟರ ನೃತ್ಯಕ್ಕೆ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

'45' ಚಿತ್ರದ ಟ್ರೇಲರ್ ನಿನ್ನೆ(ಸೋಮವಾರ) ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ  ಶಿವಣ್ಣ, ಉಪೇಂದ್ರ,  ರಾಜ್ ಬಿ. ಶೆಟ್ಟಿ ಅವರು ಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ.
ಸೂರಜ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ '45' ಸಿನಿಮಾ ನಿರ್ಮಾಣವಾಗಿದ್ದು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ.

ಈ ಸಿನಿಮಾವು  ಡಿಸೆಂಬರ್ 25 ಕ್ರಿಸ್‌ಮಸ್  ಹಬ್ಬದಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಈಗಾಗಲೇ '45' ಸಿನಿಮಾದ  ‘Afro ಟಪಾಂಗ್’ ಹಾಡು ಬಿಡುಗಡೆಯಾಗಿ 1ಕೋಟಿಗೂ ಅಧಿಕ ವೀಕ್ಷಣೆ ಕಂಡಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.