ADVERTISEMENT

Kannada Movie | ನ.21ಕ್ಕೆ ‘ಫುಲ್ ಮೀಲ್ಸ್’

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 23:13 IST
Last Updated 31 ಜುಲೈ 2025, 23:13 IST
ತೇಜಸ್ವಿನಿ ಶರ್ಮ, ಲಿಖಿತ್ ಶೆಟ್ಟಿ, ಖುಷಿ ರವಿ
ತೇಜಸ್ವಿನಿ ಶರ್ಮ, ಲಿಖಿತ್ ಶೆಟ್ಟಿ, ಖುಷಿ ರವಿ   

ಲಿಖಿತ್ ಶೆಟ್ಟಿ ನಟಿಸಿ, ನಿರ್ಮಿಸಿರುವ ‘ಫುಲ್ ಮೀಲ್ಸ್’ ಚಿತ್ರ ನವೆಂಬರ್ 21ರಂದು ತೆರೆಗೆ ಬರಲಿದೆ. ಎನ್.ವಿನಾಯಕ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಲಿಖಿತ್‌ ಈ ಹಿಂದೆ ‘ಸಂಕಷ್ಟಕರ ಗಣಪತಿ’, ‘ಫ್ಯಾಮಿಲಿ ಪ್ಯಾಕ್’, ‘ಅಬ್ಬಬ್ಬ!’ ಸಿನಿಮಾಗಳಲ್ಲಿ ನಟಿಸಿದ್ದರು. ‘ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ. ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಸಂಪೂರ್ಣವಾಗಿ ಮುಗಿದಿವೆ. ಶೀಘ್ರದಲ್ಲಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡುತ್ತೇವೆ’ ಎಂದು ಲಿಖಿತ್ ಶೆಟ್ಟಿ ತಿಳಿಸಿದ್ದಾರೆ.

ನಾಯಕಿಯರಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದಾರೆ. ಗುರು ಕಿರಣ್ ಸಂಗೀತ ನಿರ್ದೇಶನ, ಮನೋಹರ್ ಜೋಷಿ ಛಾಯಾಚಿತ್ರಗ್ರಹಣ, ದೀಪು ಎಸ್ ಕುಮಾರ್ ಸಂಕಲನವಿದೆ.

ADVERTISEMENT

ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚೆಂಡೂರ್, ರವಿಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ ಮುಂತಾದವರು ಚಿತ್ರದಲ್ಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.