ADVERTISEMENT

'ಚೆಲ್ಲೊ ಶೋ' ಭಾರತೀಯ ಸಿನಿಮಾ ಅಲ್ಲ: ಬಿ.ಎನ್‌ ತಿವಾರಿ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಸೆಪ್ಟೆಂಬರ್ 2022, 6:36 IST
Last Updated 24 ಸೆಪ್ಟೆಂಬರ್ 2022, 6:36 IST
ಪೋಸ್ಟರ್‌
ಪೋಸ್ಟರ್‌   

ಆಸ್ಕರ್‌ ಸ್ಪರ್ಧೆಗೆ ಆಯ್ಕೆಯಾಗಿರುವ ‘ಚೆಲ್ಲೊಶೋ’ ಸಿನಿಮಾ ಭಾರತೀಯ ಸಿನಿಮಾ ಅಲ್ಲ ಎಂದು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಘ ಆರೋಪ ಮಾಡಿದೆ.

ಈ ಬಗ್ಗೆ ಮಾತನಾಡಿರುವಸಿನಿ ಎಂಪ್ಲಾಯೀಸ್ ಸಂಘದ ಅಧ್ಯಕ್ಷ ಬಿ.ಎನ್‌ ತಿವಾರಿ ಅವರು‘ಚೆಲ್ಲೊ ಶೋ’ ಸಿನಿಮಾ ವಿದೇಶಿ ಸಿನಿಮಾವಾಗಿದೆ, ಇದನ್ನು ಸಿದ್ದಾರ್ಥ್ ರಾಯ್ ಕಪೂರ್ ಅವರು ಖರೀದಿ ಮಾಡಿದ್ದಾರೆ. ಆಯ್ಕೆ ಸಮಿತಿಯ ಜ್ಯೂರಿ ಸಿನಿಮಾವನ್ನು ವೀಕ್ಷಣೆ ಮಾಡದೇ ಚಿತ್ರವನ್ನು ಆಯ್ಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಭಾರತೀಯ ಚಲನಚಿತ್ರಫೆಡರೇಷನ್ಗೆ ಪತ್ರ ಬರೆದಿದ್ದು ಈ ಆಯ್ಕೆಯನ್ನು ಪುನರ್‌ ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಹಾಗೇ ಆಯ್ಕೆ ಸಮಿತಿಯಲ್ಲಿ ಹಲವಾರು ವರ್ಷಗಳಿಂದ ಹಳೆಯ ಜ್ಯೂರಿಗಳೇ ಇದ್ದು ಅವರನ್ನು ಬದಲಾವಣೆ ಮಾಡಬೇಕು ಎಂದು ಹೇಳಿದ್ದಾರೆ.

ADVERTISEMENT

ಆರ್‌ಆರ್‌ಆರ್‌ ಹಾಗೂದಿ ಕಾಶ್ಮೀರ್ ಫೈಲ್ಸ್ ರೀತಿಯ ಚಿತ್ರಗಳು ಆಸ್ಕರ್‌ ಸ್ಪರ್ಧೆಗೆ ಆಯ್ಕೆಯಾಗಬೇಕು ಎಂಬ ಕೂಗು ಸಹ ಕೇಳಿ ಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಗುಜರಾತಿ ಚಲನಚಿತ್ರ ‘ಚೆಲ್ಲೊ ಶೋ’ 95ನೇ ಅಕಾಡೆಮಿ ಪ್ರಶಸ್ತಿಗೆ (2023ರ ಆಸ್ಕರ್‌ ಪ್ರಶಸ್ತಿ) ಅಧಿಕೃತ ಪ್ರವೇಶ ಪಡೆದಿರುವ ಭಾರತೀಯ ಚಲನಚಿತ್ರವಾಗಿದೆ.

ಮುಖ್ಯಪಾತ್ರಗಳಲ್ಲಿ ಭವಿನ್‌ ರಾಬರಿ, ಭವೇಶ್‌ ಶ್ರೀಮಲಿ, ರಿಚಾ ಮೀನಾ, ದಿಪೇನ್‌ ರಾವಲ್‌ ಮತ್ತು ಪರೇಶ್‌ ಮೆಹ್ತಾ ಕಾಣಿಸಿಕೊಂಡಿದ್ದಾರೆ. ಗುಜರಾತ್‌ನ ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ಕಳೆವ ವೇಳೆ ತಾವು ಚಲನಚಿತ್ರಗಳಿಗೆ ಮನಸೋಲುತ್ತಿದ್ದ ನೆನಪುಗಳನ್ನೇ ಸ್ಫೂರ್ತಿಯಾಗಿಸಿಕೊಂಡು ನಿರ್ದೇಶಕ ಪಾನ್‌ ನಳಿನ್‌ ಅವರು ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.