ADVERTISEMENT

Gadadhari Hanuman Kannada Movie: ‘ಗದಾಧಾರಿ ಹನುಮಾನ್’ ಟೀಸರ್‌

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 23:36 IST
Last Updated 17 ಜುಲೈ 2025, 23:36 IST
ಚಿತ್ರತಂಡ
ಚಿತ್ರತಂಡ   

ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಸಿದ್ಧಗೊಳ್ಳುತ್ತಿರುವ ‘ಗದಾಧಾರಿ ಹನುಮಾನ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಕಾಲ್ಪನಿಕ ಕಥೆಯನ್ನು ಹೊಂದಿರುವ ಚಿತ್ರಕ್ಕೆ ರೋಹಿತ್ ಕೊಲ್ಲಿ ನಿರ್ದೇಶನವಿದೆ.

‘ಸಾಹಸಮಯ, ಹಾರರ್, ಥ್ರಿಲ್ಲರ್‌ ಜಾನರ್‌ನ ಚಿತ್ರವಿದು. ದೇವರು ಮತ್ತು ರಾಕ್ಷಸರ ನಡುವಿನ ಸಮರವನ್ನು ವಿಎಫ್‌ಎಕ್ಸ್‌, ಗ್ರಾಫಿಕ್ಸ್‌ಗಳ ಮೂಲಕ ಸೃಷ್ಟಿಸಲಾಗಿದೆ. ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹನುಮಂತ ಸಾಹಸಗಳೇ ಚಿತ್ರದ ಪ್ರಮುಖ ಕಥೆ. ಚಿತ್ರೀಕರಣ ಪೂರ್ಣಗೊಂಡಿದ್ದು, ನಂತರದ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲಿ ಚಿತ್ರ ತೆರೆಗೆ ಬರಲಿದೆ. ಬೆಂಗಳೂರು, ಹಂಪಿ, ಗಂಗಾವತಿ, ಅಂಜನಾದ್ರಿ, ಕಿತ್ತೂರು, ಹೊನ್ನಾಪುರ ಮುಂತಾದೆಡೆ ಚಿತ್ರೀಕರಣ ನಡೆಸಿದ್ದೇವೆ’ ಎಂದು ಮಾಹಿತಿ ನೀಡಿದರು ನಿರ್ದೇಶಕರು. 

ಕಿರಣ್‌ ಈ ಚಿತ್ರದ ನಾಯಕ. ಹೊಸ ಪ್ರತಿಭೆ ಹರ್ಷಿತಾ ನಾಯಕಿ. ವಿರಾಬ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಬಸವರಾಜ್ ಹುರಕಡ್ಲಿ ಮತ್ತು ರೇಣುಕ ಪ್ರಸಾದ್.ಕೆ.ಆರ್ ಜತೆಯಾಗಿ ಈ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. ಕಲ್ಯಾಣ್ ಕೃಷ್ಣ, ರಮೇಶ್ ಪಂಡಿತ್, ಸುನಂದ ಕಲ್ಬುರ್ಗಿ, ನಾಗೇಶ್ ಮಯ್ಯ ಮುಂತಾದವರು ಚಿತ್ರದಲ್ಲಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ, ಅರುಣ್ ಗೌಡ ಛಾಯಾಚಿತ್ರಗ್ರಹಣ, ಸಿ.ಎನ್ ಕಿಶೋರ್ ಸಂಕಲನ ಚಿತ್ರಕ್ಕಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.