ADVERTISEMENT

ನಾಳೆ 'ಗರುಡ ಗಮನ ವೃಷಭ ವಾಹನ', ‘100‘, ‘ಮುಗಿಲ್‌ಪೇಟೆ’ ಸಿನಿಮಾಗಳು ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ನವೆಂಬರ್ 2021, 12:54 IST
Last Updated 18 ನವೆಂಬರ್ 2021, 12:54 IST
‘ಗರುಡ ಗಮನ ವೃಷಭ ವಾಹನ’ ಪೋಸ್ಟರ್
‘ಗರುಡ ಗಮನ ವೃಷಭ ವಾಹನ’ ಪೋಸ್ಟರ್   

ಬೆಂಗಳೂರು:‘ಒಂದು ಮೊಟ್ಟೆಯ ಕಥೆ’ ಚಿತ್ರದ ಮೂಲಕ ಕನ್ನಡ ಸಿನಿಪ್ರಿಯರ ಗಮನ ಸೆಳೆದಿರುವ ನಟ ಹಾಗೂ ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಬಹುನಿರೀಕ್ಷಿತ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ನಾಳೆ (ನ.19) ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

ಈಗಾಗಲೇ ಟ್ರೈಲರ್ ಮೂಲಕ ಈ ಚಿತ್ರ ಸಾಕಷ್ಟು ಕುತೂಹಲ ಕೆರಳಿಸಿದೆ. ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ರಾಜ್‌ ಬಿ ಶೆಟ್ಟಿ ಕಾಣಿಸಿಕೊಂಡಿದ್ದು,ರಾಜ್ ಜತೆ ರಿಷಬ್ ಶೆಟ್ಟಿ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ.

ರಕ್ಷಿತ್ ಶೆಟ್ಟಿಯವರ ‘ಪರಂವಃ’ ಸ್ಟುಡಿಯೋಸ್ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದು, ಕಾರ್ತಿಕ್ ಗೌಡ ಅವರ ಕೆಆರ್‌ಜಿ ಸ್ಟುಡಿಯೋಸ್ ಮೂಲಕ ಹಂಚಿಕೆ ಮಾಡಲಾಗುತ್ತದೆ.ಮಿಥುನ್ ಮುಕುಂದನ್ ಅವರ ಸಂಗೀತವಿದೆ.

ADVERTISEMENT

ರಾಜ್ ಬಿ. ಶೆಟ್ಟಿ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಆಧುನಿಕ ಮಂಗಳೂರಿನ ಸಾಂಸ್ಕೃತಿಕ ಹಾಗೂ ಕರಾವಳಿ ಹಿನ್ನೆಲೆಯಲ್ಲಿ ನಡೆಯುವ ಚಿತ್ರದ ಕಥೆಯಲ್ಲಿ ಹರಿ ಮತ್ತು ಶಿವ ಎಂಬ ಎರಡು ಪಾತ್ರಗಳ ಜೀವನ ಕಥೆಯಿದೆ. ಕರಾವಳಿಯಹುಲಿವೇಷವೂ ಈ ಚಿತ್ರದಲ್ಲಿ ಸಾಕಷ್ಟು ಗಮನ ಸೆಳೆದಿದೆ.

ಇನ್ನು ಈ ಚಿತ್ರದ ಎಂದೋ ಬರೆದ ಕವಿತೆಯ ಲಿರಿಕಲ್ ವಿಡಿಯೊ ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಧ್ವನಿಯಲ್ಲಿ ಮೆಲೋಡಿ ಹಾಡೊಂದು ಗುನುಗುವಂತಿದೆ.

ಇನ್ನೊಂದೆಡೆ ಕ್ರೆಜಿಸ್ಟಾರ್ ರವಿಚಂದ್ರನ್ ಅವರ ಮಗ ಮನೋರಂಜನ್ ಅವರ ಮುಗಿಲ್‌ಪೇಟೆ ಹಾಗೂ ರಮೇಶ್ ಅರವಿಂದ್ ನಿರ್ದೇಶಿಸಿ, ನಟಿಸಿರುವ ‘100’ ಎಂಬ ಸಿನಿಮಾಗಳು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.