ಸಿಂಪಲ್ ಸುನಿ ನಿರ್ದೇಶನದ ‘ಗತವೈಭವ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಯುವ ನಟ ದುಶ್ಯಂತ್‌ಗೆ ಆಶಿಕಾ ರಂಗನಾಥ್ ನಾಯಕಿಯಾಗಿದ್ದು, ಚಿತ್ರ ನವೆಂಬರ್ 14ರಂದು ತೆರೆಗೆ ಬರಲಿದೆ.
‘ಗತವೈಭವ ತುಂಬಾ ಗಂಭೀರವಾಗಿ ಮಾಡಿದ ಸಿನಿಮಾ. ನನ್ನ ಬ್ಯಾನರ್‌ನಡಿ ಮಾಡಬೇಕು ಎಂದುಕೊಂಡ ಸಿನಿಮಾವಿದು. ಆದರೆ ದುಶ್ಯಂತ್ ಈ ಪ್ರಾಜೆಕ್ಟ್ ಮಾಡಬೇಕು ಎಂದು ಬರೆದಿತ್ತು ಎನ್ನಿಸುತ್ತದೆ. ನಾಲ್ಕು ಸಿನಿಮಾಗಳನ್ನು ಮಾಡಿದಷ್ಟು ಅನುಭವ ನೀಡಿದೆ. ಕೆಲವು ಸಿನಿಮಾ ಪ್ರಚಾರ ಮಾಡಿ ತೆರೆಗೆ ಬರುತ್ತವೆ. ಈ ಚಿತ್ರ ಬಿಡುಗಡೆಯಾದರೆ ಪ್ರಚಾರವಾಗುತ್ತದೆ. ನಾನು ಪ್ರೇಕ್ಷಕನ ರೀತಿ ಈ ಸಿನಿಮಾಗಾಗಿ ಕಾಯುತ್ತಿದ್ದೇವೆ. ಚಿತ್ರದಲ್ಲಿ ಮನರಂಜನೆ, ಎಮೋಷನ್ ಎಲ್ಲವೂ ಇವೆ’ ಎಂದರು ಸುನಿ.
‘ನೂರು ದಿನಕ್ಕೂ ಹೆಚ್ಚು ಕಾಲ ಶೂಟಿಂಗ್ ಮಾಡಿದ್ದೇವೆ. ಪೋರ್ಚುಗಲ್‌ನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಗ್ರಾಫಿಕ್ ಕಾರಣದಿಂದ ಸಿನಿಮಾ ತಡವಾಯ್ತು. ಚಿತ್ರ ನಿರೀಕ್ಷೆಗೂ ಮೀರಿದಷ್ಟು ಅದ್ಭುತವಾಗಿ ಮೂಡಿ ಬಂದಿದೆ. ಗತವೈಭವವಾಗಿಯೇ ಮೂಡಿಬಂದಿದೆ. ಸುನಿ ಸರ್ ಅವರ ಹತ್ತು ಸಿನಿಮಾಗಳಲ್ಲಿ ಇದು ಅತ್ಯುತ್ತಮ ಸಿನಿಮಾವಾಗಲಿದೆ’ ಎಂದರು ದುಶ್ಯಂತ್.
‘ನನಗೆ ಚಿತ್ರದಲ್ಲಿ ನಾಲ್ಕು ಲುಕ್‌ಗಳಿವೆ. ಗತವೈಭವದಲ್ಲಿ ನಟಿಸಿರುವುದು ಬೇರೆಯದ್ದೇ ಅನುಭವ. ತೆರೆಮೇಲೆ ವೈಭವವಾಗಿ ಕಾಣಿಸಲು ಅದ್ಧೂರಿಯಾಗಿ ಚಿತ್ರೀಕರಣ ಮಾಡಲಾಗಿದೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿದ ಅನುಭವ’ ಎಂದರು ಆಶಿಕಾ.
ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ಸೈಂಟಿಫಿಕ್ ಥ್ರಿಲ್ಲರ್ ಅಂಶಗಳಿವೆ. ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಕ್ ಹಾಗೂ ಸುನಿ ಚಿತ್ರ ನಿರ್ಮಾಣ ಮಾಡಿದ್ದಾರೆ. ವಿಲಿಯಂ ಡೇವಿಡ್ ಛಾಯಾಚಿತ್ರಗ್ರಹಣ, ಜೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.