ADVERTISEMENT

ಶಿವರಾಜ್ ಕುಮಾರ್‌ ಅಭಿನಯಿಸುತ್ತಿರುವ ‘ಘೋಸ್ಟ್‌’ ಮೊದಲ ಹಂತದ ಶೂಟಿಂಗ್‌ ಮುಕ್ತಾಯ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2022, 10:02 IST
Last Updated 23 ನವೆಂಬರ್ 2022, 10:02 IST
‘ಘೋಸ್ಟ್‌’ ಸೆಟ್‌ನಲ್ಲಿ ಶಿವರಾಜ್‌ಕುಮಾರ್‌, ಶ್ರೀನಿ ಮತ್ತು ತಂಡ
‘ಘೋಸ್ಟ್‌’ ಸೆಟ್‌ನಲ್ಲಿ ಶಿವರಾಜ್‌ಕುಮಾರ್‌, ಶ್ರೀನಿ ಮತ್ತು ತಂಡ   

ಶಿವರಾಜ್ಕುಮಾರ್‌ ಅಭಿನಯಿಸುತ್ತಿರುವಶ್ರೀನಿ ನಿರ್ದೇಶನದ ‘ಘೋಸ್ಟ್‌’ ಚಿತ್ರದ ಮೊದಲ ಹಂತದ ಚಿತ್ರೀಕರಣದ ಮುಗಿದಿದೆ.ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್‌ಗಳಲ್ಲಿ 28 ದಿನಗಳ ಕಾಲ ಚಿತ್ರೀಕರಣ ನಡೆದಿದೆ.

ಶಿವರಾಜ್ ಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ. ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಸಂದೇಶ್ ನಾಗರಾಜ್ ಅರ್ಪಿಸುತ್ತಿದ್ದಾರೆ.ನಿರ್ದೇಶಕ ಶ್ರೀನಿ ಅವರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.