ADVERTISEMENT

ಮನ ಕದ್ದ ‘ಗಿರ್ಕಿ’ಯ ಹಾಡು... ‘ಕದಿಯಲೇನು...’

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 10:23 IST
Last Updated 17 ಜೂನ್ 2022, 10:23 IST
ವಿಲೋಕ್‌ರಾಜ್‌ ದಿವ್ಯಾ ಉರುಡಗ
ವಿಲೋಕ್‌ರಾಜ್‌ ದಿವ್ಯಾ ಉರುಡಗ   

ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ‘ಗಿರ್ಕಿ’ಯ ಹಾಡು ಮನಸೂರೆಗೊಂಡಿದೆ. ಈ ವೀರೇಶ್ ಪಿ.ಎಂ. ನಿರ್ದೇಶಿಸಿದ್ದಾರೆ‌. ವೀರೇಶ್ ಅವರಿಗೆ ಇದು ಮೊದಲ ಚಿತ್ರ.

ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ ‘ಕದಿಯಲೇನು...’ ಎಂಬ ಹಾಡನ್ನು ಕನ್ನಡ ಚಿತ್ರರಂಗದ ತಾರಾ ಜೋಡಿ, ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಇತ್ತೀಚೆಗೆ ಬಿಡುಗಡೆ ಮಾಡಿದರು.

ಎ2 ಮ್ಯೂಸಿಕ್‌ ಚಾನೆಲ್‌ ಮೂಲಕ ಹಾಡು ಬಿಡುಗಡೆಯಾಗಿದೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡಿಗೆ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿನ್ಮಯ್ ಶ್ರೀಪಾದ ಹಾಡಿದ್ದಾರೆ. ವಿಲೋಕ್ ರಾಜ್ ಹಾಗೂ ದಿವ್ಯ ಉರುಡುಗ ಅಭಿನಯಿಸಿದ್ದಾರೆ. ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ.

ADVERTISEMENT

ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಾಯಾಗ್ರಾಹಕ ನವೀನ್ ಕುಮಾರ್ ಛಲ್ಲ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ. ಮೋಹನ್ ಅವರ ನೃತ್ಯ ನಿರ್ದೇಶನ ಕೂಡ ನೋಡುಗರ ಗಮನ ಸೆಳೆಯುತ್ತಿದೆ. ವೀರ್ ಸಮರ್ಥ್ ಅವರ ಸುಮಧುರ ಸಂಗೀತ ಕೇಳುಗರ ಮನಗೆದ್ದಿದೆ.

ಜುಲೈ 8ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವಾಸುಕಿ ಭುವನ್ ಅವರ ಸಹ ನಿರ್ಮಾಣವಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್ ಪಿ.ಎಂ. ಹಾಡುಗಳನ್ನು ಬರೆದಿದ್ದಾರೆ. ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ಹಾಸ್ಯ ಕಲಾವಿದರಾಗಿ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.