ADVERTISEMENT

ಕಾಳಿ ಪೋಸ್ಟರ್‌ ವಿವಾದ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಚಿತ್ರ ನಿರ್ದೇಶಕಿ ಲೀನಾ

​ಪ್ರಜಾವಾಣಿ ವಾರ್ತೆ
Published 14 ಜನವರಿ 2023, 16:12 IST
Last Updated 14 ಜನವರಿ 2023, 16:12 IST
ಲೀನಾ ಮಣಿಮೇಕಲೈ
ಲೀನಾ ಮಣಿಮೇಕಲೈ   

ನವದೆಹಲಿ: ತಾವು ನಿರ್ಮಿಸಿದ ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಕಾಳಿ ಮಾತೆ ಕೈಯಲ್ಲಿ ಸಿಗರೆಟ್‌ ಇರುವಂತೆ ಚಿತ್ರಿಸಿದ್ದನ್ನು ವಿರೋಧಿಸಿ ದಾಖಲಾಗಿರುವ ಹಲವಾರು ಮೊಕದ್ದಮೆಗಳಿಂದ ರಕ್ಷಣೆ ನೀಡುವಂತೆ ಕೋರಿ ಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಒಳಪಡಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಪಿ.ಎಸ್‌. ನರಸಿಂಹ ಅವರಿದ್ದ ಪೀಠದ ಎದುರು ಉಲ್ಲೇಖಿಸಲಾಯಿತು. ಅರ್ಜಿ ವಿಚಾರಣೆಯನ್ನು ಇದೇ 20ಕ್ಕೆ ಸುಪ್ರೀಂ ಕೋರ್ಟ್‌ ನಿಗದಿಪಡಿಸಿದೆ.

ಬೇರೆಬೇರೆ ರಾಜ್ಯಗಳಲ್ಲಿ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ. ಈ ಅರ್ಜಿಗಳಿಗೆ ಸಂಬಂಧಿಸಿ ನಡೆಯುತ್ತಿರುವ ವಿಚಾರಣೆಗಳಿಗೆ ತಡೆ ನೀಡುವಂತೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ಬೆದರಿಕೆಯೊಡ್ಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ADVERTISEMENT

ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಉದ್ದೇಶವನ್ನು ಚಿತ್ರದ ಪೋಸ್ಟರ್‌ ಹೊಂದಿರಲಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಚಿತ್ರದ ಪೋಸ್ಟರ್‌ಅನ್ನು ಲೀನಾ ಅವರು ಟ್ವಿಟರ್‌ನಲ್ಲಿ ಪ್ರದರ್ಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.