ADVERTISEMENT

Kannada Movies: ಗಣೇಶ್‌ ಸಿನಿಮಾಗೆ ಹರಿಕೃಷ್ಣ ಸಂಗೀತ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2025, 0:30 IST
Last Updated 8 ನವೆಂಬರ್ 2025, 0:30 IST
ಹರಿಕೃಷ್ಣ 
ಹರಿಕೃಷ್ಣ    

ಎಂ.ಮುನೇಗೌಡ ನಿರ್ಮಾಣದ, ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ‘ಬಹದ್ದೂರ್‌’ ಖ್ಯಾತಿಯ ಚೇತನ್ ಕುಮಾರ್ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಲಿದ್ದಾರೆ.

ಎಸ್‌.ವಿ.ಸಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಸದ್ಯ ‘ಪ್ರೊಡಕ್ಷನ್‌ ನಂ.3’ ಎಂಬ ಶೀರ್ಷಿಕೆ ಇಡಲಾಗಿದೆ. ‘ಬಹದ್ದೂರ್’, ‘ಭರ್ಜರಿ’, ‘ಭರಾಟೆ’, ‘ಜೇಮ್ಸ್’ನಂತಹ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಚೇತನ್ ಕುಮಾರ್ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಚಿತ್ರದಲ್ಲಿ ಸಾಕಷ್ಟು ಅನುಭವಿ ಕಲಾವಿದರು ಅಭಿನಯಿಸಲಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದಿದೆ ಚಿತ್ರತಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT