ಎಸ್.ಎಸ್. ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಚಿತ್ರದ ಜನಪ್ರಿಯ 'ನಾಟು ನಾಟು' ಹಾಡಿಗೆ ಗೋಲ್ಡನ್ ಗ್ಲೋಬ್ ಅವಾರ್ಡ್ಸ್ ಪ್ರಶಸ್ತಿ ಲಭಿಸಿದೆ.
ಇದರಂತೆ ಚಿತ್ರತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿವೆ.
'ಇಂದೊಂದು ವಿಶೇಷವಾದ ಸಾಧನೆ' ಎಂದು ಇಡೀ ಚಿತ್ರತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಆರ್‌ಆರ್‌ಆರ್ ಸಿನಿಮಾದ 'ನಾಟು ನಾಟು' ಹಾಡು 2023ರ ಗೋಲ್ಡನ್ ಗ್ಲೋಬ್ 'ಬೆಸ್ಟ್ ಒರಿಜಿನಲ್ ಸಾಂಗ್' ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.
ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ ಮಾಡಿದ ನಾಟು ನಾಟು ಹಾಡಿಗೆ ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗಂಜ್ ಕಂಠ ನೀಡಿದ್ದಾರೆ.
ಆರ್‌ಆರ್‌ಆರ್ ಚಿತ್ರವು ಜಾಗತಿಕವಾಗಿ ₹1,200 ಕೋಟಿಗೂ ಹೆಚ್ಚು ಮೊತ್ತವನ್ನು ಸಂಗ್ರಹಿಸಿತ್ತು.
ಪ್ರಮುಖರ ಪ್ರತಿಕ್ರಿಯೆಗಳು:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.