ADVERTISEMENT

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾ ಬಿಡುಗಡೆ ನ.26ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 19:30 IST
Last Updated 11 ನವೆಂಬರ್ 2021, 19:30 IST
ಗಣೇಶ್‌ ಹಾಗೂ ನಿಶ್ವಿಕಾ ನಾಯ್ಡು
ಗಣೇಶ್‌ ಹಾಗೂ ನಿಶ್ವಿಕಾ ನಾಯ್ಡು   

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ, ಸಿಂಪಲ್‌ ಸುನಿ ನಿರ್ದೇಶನದ ‘ಸಖತ್‌’ ಚಿತ್ರದ ಬಿಡುಗಡೆಯನ್ನು ಚಿತ್ರತಂಡವು ನ.26ಕ್ಕೆ ಮುಂದೂಡಿದೆ. ನಟ ಪುನೀತ್ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದಾಗಿ ಕನ್ನಡ ಚಿತ್ರರಂಗ ದಿಗ್ಭ್ರಮೆಗೆ ಒಳಗಾಗಿದೆ. ಹೀಗಾಗಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಬದಲಿಸಿದೆ. ನವೆಂಬರ್ 12ರ ಬದಲು 26ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದಿದೆ ಚಿತ್ರತಂಡ.

ಈಗಾಗಲೇ ಟೀಸರ್‌ ಹಾಗೂ ಹಾಡುಗಳ ಮೂಲಕ ‘ಸಖತ್‌’ ಸಖತ್ತಾಗಿ ಸದ್ದು ಮಾಡುತ್ತಿದೆ.ಸಿಂಪಲ್ ಸುನಿ, ಗಣೇಶ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, ಅಂಧನ‌ ಪಾತ್ರದಲ್ಲಿ ಗಣೇಶ್‌ ಲುಕ್.. ಸಿಂಪಲ್ ಸುನಿ ಡೈಲಾಗ್ ಕಿಕ್.. ಜೂಡಾ ಸ್ಯಾಂಡಿ ಸಂಗೀತ ಎಲ್ಲವೂ ಚಿತ್ರಪ್ರೇಮಿಗಳನ್ನು ಸೆಳೆದಿದೆ.

ರೊಮ್ಯಾಂಟಿಕ್ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥಾಹಂದರವನ್ನು ಚಿತ್ರ ಒಳಗೊಂಡಿದೆ. ಟಿ.ವಿ. ರಿಯಾಲಿಟಿ ಶೋ ಹಾಗೂ ಕೋರ್ಟ್ ಕೇಸ್ ಸುತ್ತ ಸಿನಿಮಾ ಕಥೆ ಹೆಣೆಯಲಾಗಿದೆ. ಗಣೇಶ್‌ ರಿಯಾಲಿಟಿ ಶೋ ಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ನಟಿ ನಿಶ್ವಿಕಾ ನಾಯ್ಡು ಹಾಗೂ ಸುರಭಿ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಧರ್ಮಣ್ಣ ಕಡೂರು ಸೇರಿದಂತೆ ಮುಂತಾದವರು ತಾರಾಗಣದಲ್ಲಿದ್ದಾರೆ. ಕೆವಿಎನ್ ಪ್ರೊಡಕ್ಷನ್‌ನಡಿ ತಯಾರಾಗಿರುವ ಈ ಚಿತ್ರಕ್ಕೆ ನಿಶಾ ವೆಂಕಟ್ ಕೋನಾಂಕಿ ಹಾಗೂ ಸುಪ್ರಿತ್ ಬಂಡವಾಳ ಹೂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.