ADVERTISEMENT

‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ನಟ ಗಣೇಶ್ ಸಾಥ್

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 10:07 IST
Last Updated 20 ಜನವರಿ 2026, 10:07 IST
   

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ, ನಿಹಾರ್ ಮುಕೇಶ್, ರಚನಾ ಇಂದರ್ ನಟನೆಯ  ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಅವರು ಸಾಥ್ ನೀಡಿದ್ದಾರೆ.

ಈ ಸಿನಿಮಾ ಕುರಿತು ಮಾತನಾಡಿರುವ ಗೋಲ್ಡನ್ ಸ್ಟಾರ್ ಗಣೇಶ್, ‘ತೀರ್ಥರೂಪ ತಂದೆಯವರಿಗೆ’ ಚಿತ್ರವು  ಜ.1ಕ್ಕೆ ತೆರೆಕಂಡು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸದ್ಯ, ನಾನೀಗ ‘ರಾಮ್’ ಚಿತ್ರದ ಚಿತ್ರೀಕರಣಕ್ಕಾಗಿ  ಕಾಶ್ಮೀರದಲ್ಲಿ ಇದ್ದೇನೆ. ಬೆಂಗಳೂರಿಗೆ ಬಂದ ಬಳಿಕ ನಾನು ಕೂಡ  ‘ತೀರ್ಥರೂಪ ತಂದೆಯವರಿಗೆ’ ಚಿತ್ರವನ್ನು ವೀಕ್ಷಿಸುತ್ತೇನೆ’ ಎಂದಿದ್ದಾರೆ.

‘ಈ ಸಿನಿಮಾದ ಕಥೆ–ಚಿತ್ರಕಥೆ, ನಿರ್ದೇಶನದ ಬಗ್ಗೆ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದು, ಈ ಚಿತ್ರವನ್ನು ನೋಡಿ ಹರಸಿ, ಹಾರೈಸಿ ಎಂದು ಗಣೇಶ್ ಹೇಳಿದ್ದಾರೆ.

ಈ ಚಿತ್ರದಲ್ಲಿ ರಾಜೇಶ್ ನಟರಂಗ, ಸಿತಾರಾ, ರವೀಂದ್ರ ವಿಜಯ್, ಅಜಿತ್ ಹಂದೆ ಸೇರಿದಂತೆ ಅನೇಕರು ಅಭಿನಯಿಸಿದ್ದಾರೆ.

ADVERTISEMENT

ಈ ಚಿತ್ರವನ್ನು 'ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್' ನಿರ್ಮಿಸಿದ್ದು, ರಾಮೇನಹಳ್ಳಿ ಜಗನ್ನಾಥ್ ಅವರೇ ಕಥೆ ಬರೆದಿದ್ದಾರೆ. ಚಿತ್ರಕ್ಕೆ ದೀಪಕ್ ಯರಗೇರಾ ಛಾಯಾಚಿತ್ರಗ್ರಹಣ, ಜೋ ಕಾಸ್ಟ್ ಸಂಗೀತ ಸಂಯೋಜನೆ ಮತ್ತು ಪ್ರಶಾಂತ್ ರಾಜಪ್ಪ ಸಂಭಾಷಣೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.