
ಕೆಲ ತಿಂಗಳ ಹಿಂದೆ ತೆರೆಕಂಡ ರಾಜ್ ವಿಜಯ್ ನಿರ್ಮಾಣ ಹಾಗೂ ನಿರ್ದೇಶನದ ‘ಗ್ರೀನ್’ ಚಿತ್ರ ಜೀ5 ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ. ಚಿತ್ರದ ಪ್ರಮುಖ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್ ನಟಿಸಿದ್ದಾರೆ.
ಹಲವು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸಗಳಲ್ಲಿ ಪ್ರದರ್ಶನಗೊಂಡಿರುವ ಈ ಸಿನಿಮಾ, ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿದೆ
‘ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೋರಾಡುವ ನಾಯಕನ ಕಥೆಯೇ ಗ್ರೀನ್.
ತನ್ನ ನಿಯಂತ್ರಣವನ್ನು ಕಳೆದುಕೊಂಡು ನಾಯಕ ಭಯ ಮತ್ತು ಗೊಂದಲದ ವ್ಯೂಹದಲ್ಲಿ ಸಿಲುಕುತ್ತಾನೆ. ಈ ನಡುವೆ ತಾನು ನಿಜವಾಗಿಯೂ ಯಾರು ಎಂಬುದನ್ನು ಹುಡುಕಲು ಪ್ರಯತ್ನಿಸುತ್ತಾನೆ’ ಇದುವೇ ಕಥೆಯ ಸಾರಾಂಶ ಎಂದಿದ್ದಾರೆ ರಾಜ್ ವಿಜಯ್. ಆರ್.ಜೆ.ವಿಕ್ಕಿ, ವಿಶ್ವನಾಥ್ ಮಾಂಡಲೀಕ, ಶಿವ ಮಂಜು, ಡಿಂಪಿ ಫದ್ಯಾ, ಮುರುಡಯ್ಯ, ರಾಮಚಂದ್ರ, ಗಿರೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.