ಸೈಕಲಾಜಿಕಲ್ ಕಥಾಹಂದರ ಹೊಂದಿರುವ ‘ಗ್ರೀನ್’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ರಾಜ್ ವಿಜಯ್ ನಿರ್ದೇಶನದ ಚಿತ್ರವಿದು.
‘ಚಿಕ್ಕ ವಯಸ್ಸಿನಿಂದಲೂ ನನಗೆ ಚಿತ್ರ ನಿರ್ದೇಶಕ ಆಗಬೇಕೆಂಬ ಆಸೆ ಇತ್ತು. ಅದು ಈಗ ಈಡೇರಿದೆ. ಮನೋವೈಜ್ಞಾನಿಕ ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರ. ತನ್ನ ಇಡೀ ಜೀವನವನ್ನೇ ನಿಯಂತ್ರಿಸುತ್ತಿರುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಹೋರಾಡುವ ನಾಯಕನ ಕಥೆಯೇ ‘ಗ್ರೀನ್’. ಇದೊಂದು ಕಾಡಿನಲ್ಲಿ ನಡೆಯುವ ಕಥೆಯಾಗಿದ್ದು, ಊಟಿ ಬಳಿಯಲ್ಲಿ ಹೆಚ್ಚಿನ ಚಿತ್ರೀಕರಣ ಮಾಡಲಾಗಿದೆ. ಈಗಾಗಲೇ ಸಾಕಷ್ಟು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪಡೆದಿದೆ. ಅಕ್ಟೋಬರ್ 23ರಂದು ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕ.
ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ಬಂಡವಾಳ ಹೂಡಿದ್ದಾರೆ. ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ. ವಿಕ್ಕಿ ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ. ಶಕ್ತಿ ಸ್ಯಾಕ್ ಸಂಗೀತ, ಮಧುಸೂದನ್ ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.