ನಟ ಸೃಜನ್ ಲೋಕೇಶ್ ನಿರ್ದೇಶನದ ಚೊಚ್ಚಲ ಸಿನಿಮಾ ‘ಜಿಎಸ್‌ಟಿ’ ಸದ್ಯದಲ್ಲೇ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.
ಸುಮಾರು ಎರಡು ವರ್ಷಗಳ ಹಿಂದೆ ಸೆಟ್ಟೇರಿದ್ದ ಈ ಸಿನಿಮಾವನ್ನು ಸಂದೇಶ್ ಪ್ರೊಡಕ್ಷನ್ಸ್‌ನಡಿ ಸಂದೇಶ್ ನಾಗರಾಜ್ ನಿರ್ಮಾಣ ಮಾಡಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಸೃಜನ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ಯು/ಎ’ ಪ್ರಮಾಣಪತ್ರ ನೀಡಿದೆ. ಚಿತ್ರದ ನಿರ್ಮಾಣದ ಜೊತೆಗೆ ನಿರ್ಮಾಪಕ ಸಂದೇಶ್ ಅವರು ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಗಿರಿಜಾ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಅಭಿನಯಿಸಿದ್ದಾರೆ. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮನರಂಜನೆಯೇ ಪ್ರಧಾನವಾಗಿರುವ ಈ ಚಿತ್ರಕ್ಕೆ ‘ಘೋಸ್ಟ್ ಇನ್ ಟ್ರಬಲ್’ ಎಂಬ ಅಡಿಬರಹವಿದೆ.
ಸೃಜನ್ ಲೋಕೇಶ್‌ಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಶೋಭರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.