ADVERTISEMENT

ಅಭಿಮನ್ಯು, ಆದ್ಯಾ ಪ್ರಿಯಾ ನಟನೆಯ ‘ಹಚ್ಚೆ’ ಆ.22 ರಂದು ತೆರೆಗೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 0:15 IST
Last Updated 12 ಆಗಸ್ಟ್ 2025, 0:15 IST
ಆದ್ಯಾ ಪ್ರಿಯಾ, ಅಭಿಮನ್ಯು  
ಆದ್ಯಾ ಪ್ರಿಯಾ, ಅಭಿಮನ್ಯು     

ಅಶ್ವ ಫಿಲಂಸ್ ಲಾಂಛನದಲ್ಲಿ ಯಶೋಧರ ಅವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಿರುವ ‘ಹಚ್ಚೆ’ ಸಿನಿಮಾ ಆ.22ರಂದು ತೆರೆಕಾಣಲಿದೆ. 

ಮೈಸೂರಿನ ರಂಗನಟ ಅಭಿಮನ್ಯು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಾಯಕಿಯಾಗಿ ಆದ್ಯಾ ಪ್ರಿಯಾ ನಟಿಸಿದ್ದಾರೆ. ಅನುಪ್ರೇಮ, ಗುರುರಾಜ್ ಹೊಸಕೋಟೆ, ದುಷ್ಯಂತ್, ಶ್ರೀಮಂತ್ ಸುರೇಶ್, ಚಂದ್ರು ಬಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಇತಿಹಾಸದ ಶಕ್ತಿ ಎಂಬ ಅಡಿಬರಹವಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರವನ್ನು ಸಿನಿಮಾ ಹೊಂದಿದೆ. ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಯಾಸಿನ್ ಛಾಯಾಚಿತ್ರಗ್ರಹಣ ಈ ಚಿತ್ರಕ್ಕಿದೆ. ಈಗಾಗಲೇ ಚಿತ್ರದ ‘ವಿಘ್ನೇಶ್ವರಾಯ...’ ಎಂಬ ಹಾಡು ಬಿಡುಗಡೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT