
‘ರತ್ನನ್‌ಪ್ರಪಂಚ’ ಖ್ಯಾತಿಯ ನಟ ಪ್ರಮೋದ್ ನಟನೆಯ ಹೊಸ ಸಿನಿಮಾ ‘ಹಲ್ಕಾ ಡಾನ್’ ಚಿತ್ರೀಕರಣ ಆರಂಭಗೊಂಡಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕೆ ಸುದೀಪ್ ಕ್ಲ್ಯಾಪ್ ಮಾಡಿದ್ದರು.
ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತಿದ್ದು, ‘ಟಗರು’, ‘ಸಲಗ’ ಹಾಗೂ ‘ಯುಐ’ ಚಿತ್ರಗಳನ್ನು ನಿರ್ಮಿಸಿರುವ ಕೆ.ಪಿ.ಶ್ರೀಕಾಂತ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಛಲಾ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವೀನಸ್ ಎಂಟರ್‌ಟೈನರ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದೆ. ಚಿತ್ರಕ್ಕೆ ‘ಸಾಯಿ ಕುಮಾರ್ ಫ್ಯಾನ್’ ಎಂಬ ಅಡಿಬರಹವಿದ್ದು, ಸಾಯಿಕುಮಾರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಮೋದ್ ನಾಯಕನಾಗಿ, ಅಮೃತಾ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ರಮೇಶ್ ಇಂದಿರಾ, ಜ್ಯೋತಿ ರೈ ತಾರಾಬಳಗದಲ್ಲಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಈ ಸಿನಿಮಾ ನಿರ್ಮಾಣವಾಗುತ್ತಿದೆ. ವಿ. ಹರಿಕೃಷ್ಣ ಸಂಗೀತ, ಸತ್ಯ ಹೆಗಡೆ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.