ADVERTISEMENT

35ನೇ ವಸಂತಕ್ಕೆ ಕಾಲಿಟ್ಟ ನಟಿ ಸಮಂತಾ: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಏಪ್ರಿಲ್ 2022, 8:50 IST
Last Updated 28 ಏಪ್ರಿಲ್ 2022, 8:50 IST
ಸಮಂತಾ
ಸಮಂತಾ    

ಹೈದರಾಬಾದ್: ಬಹುಭಾಷಾ ನಟಿ ಸಮಂತಾ ಅವರು ಇಂದು (ಗುರುವಾರ) 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಸಮಂತಾ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಟ –ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

‘ಮನಂ’, ‘ಮಜಿಲಿ’, ‘ಎ ಮಾಯ ಚೇಸಾವೆ’, ‘ಆಟೋನಗರ್‌ ಸೂರ್ಯ’ ಚಿತ್ರಗಳಲ್ಲಿ ಸಮಂತಾ – ನಾಗ ಚೈತನ್ಯ ಒಟ್ಟಿಗೆ ನಟಿಸಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇತ್ತೀಚೆಗೆ ಸುಕುಮಾರ್ ನಿರ್ದೇಶನದಲ್ಲಿ ಮೂಡಿಬಂದ ‘ಪುಷ್ಪ’ ಸಿನಿಮಾದಲ್ಲಿ ಸಮಂತಾ, ‘ಹೂ ಅಂತಿಯಾ ಮಾವ.. ಊ ಊ ಅಂತಿಯಾ’ಹಾಡಿಗೆ ಮೈ ಚಳಿ ಬಿಟ್ಟು ಸೊಂಟ ಬಳುಕಿಸಿದ್ದರು.

ADVERTISEMENT

ಗುಣಶೇಖರ್ ನಿರ್ದೇಶನದ ‘ಶಾಕುಂತಲಂ’ ಚಿತ್ರದಲ್ಲಿ ಸಮಂತಾ ಕಾಣಿಸಿಕೊಳ್ಳುತ್ತಿದ್ದಾರೆ. ಜತೆಗೆ, ಫಿಲಿಪ್‌ ಜಾನ್‌ ನಿರ್ದೇಶನದ ‘ಅರೆಂಜ್‌ಮೆಂಟ್ಸ್‌ ಆಫ್ ಲವ್’ ಎಂಬ ಹಾಲಿವುಡ್‌ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

ಹರಿಶಂಕರ್ ನಿರ್ದೇಶನದ ‘ಯಶೋದಾ’ ಚಿತ್ರದಲ್ಲಿ ಸಮಂತಾ ಕಾಣಿಸಿಕೊಳ್ಳಲಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

2010ರಲ್ಲಿ ‘ಎ ಮಾಯ ಚೇಸಾವೆ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಸಮಂತಾ, ಇದುವರೆಗೆ 45 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

‘ಈಗ’, ‘ಜಾನು’, ‘ಮಜಿಲಿ’ ‘ರಂಗಸ್ಥಲಂ’ ಸಿನಿಮಾ ಸೇರಿದಂತೆ ‘ದಿ ಫ್ಯಾಮಿಲಿ ಮ್ಯಾನ್‌ –2’ ವೆಬ್‌ ಸರಣಿ ಸಮಂತಾಗೆ ಹೆಚ್ಚು ಖ್ಯಾತಿ ತಂದುಕೊಟ್ಟಿವೆ.

ಸಮಂತಾ ಹಾಗೂ ನಾಗ ಚೈತನ್ಯ ಅವರು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.