ನಟ ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಇಂದು (ಜುಲೈ 24) ತೆರೆಕಂಡಿದೆ. ಚಿತ್ರದಲ್ಲಿನ ಪವನ್ ಕಲ್ಯಾಣ್ ಪಾತ್ರವನ್ನು ವಿನ್ಯಾಸಗೊಳಿಸಲು ಖ್ಯಾತ ನಟರಾದ ಎನ್‌ಟಿಆರ್ ಮತ್ತು ಎಂಜಿಆರ್ ಅವರು ನಿಭಾಯಿಸಿದ ಪಾತ್ರಗಳೇ ಸ್ಫೂರ್ತಿ ಎಂದಿದ್ದಾರೆ ನಿರ್ದೇಶಕ ಜ್ಯೋತಿ ಕೃಷ್ಣ.
‘ಹರಿ ಹರ ವೀರ ಮಲ್ಲು’ವಾಗಿ ಪವನ್ ಕಲ್ಯಾಣ್ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. 17ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ನಾಯಕನಾಗಿ ಪವರ್ ಸ್ಟಾರ್ ಮಿಂಚಿದ್ದಾರೆ. ಜ್ಯೋತಿ ಕೃಷ್ಣ ಮತ್ತು ಕ್ರಿಶ್ ಜಗರ್ಲಮುಡಿ ನಿರ್ದೇಶನದ ಈ ಚಿತ್ರ ತೆಲುಗು, ಕನ್ನಡ ಸೇರಿದಂತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬಂದಿದೆ. ಚಿತ್ರದಲ್ಲಿ ನಿಧಿ ಅಗರ್‌ವಾಲ್ ನಾಯಕಿಯಾಗಿ ಮಿಂಚಿದ್ದಾರೆ. ಬಾಬಿ ಡಿಯೋಲ್, ನರ್ಗೀಸ್ ಫಕ್ರಿ, ಆದಿತ್ಯಾ ಮೆನನ್, ಶುಭಲೇಖ ಸುಧಾಕರ್ ತಾರಾಗಣದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.