ನಟಿ ಹರ್ಷಿಕಾ ಪೂಣಚ್ಚ ಇತ್ತೀಚೆಗಷ್ಟೇ ಹೊಸ ಸಿನಿಮಾ ಘೋಷಿಸಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಈ ಚಿತ್ರ ಸಿದ್ಧಗೊಳ್ಳಲಿದೆ.
ಇತ್ತೀಚೆಗಷ್ಟೇ ಹರ್ಷಿಕಾ ಪತಿ ಭುವನ್ ಪೊನ್ನಣ್ಣ ‘ಹಲೋ 123’ ಚಿತ್ರ ಘೋಷಿಸಿದ್ದರು. ಅದನ್ನು ಕೂಡ ಯೋಗರಾಜ್ ಭಟ್ ಅವರೇ ನಿರ್ದೇಶಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳನ್ನು ಅಮೃತಾ ಸಿನಿ ಕ್ರಾಫ್ಟ್ ನಿರ್ಮಿಸುತ್ತಿದೆ.
‘ಎರಡೂ ಬೇರೆ ಬೇರೆ ಸಿನಿಮಾಗಳು. ಮಹಿಳಾ ಪ್ರಧಾನ ಕಥೆ ಹೊಂದಿರುವ ಚಿತ್ರವಿದು. ಸಿನಿಮಾ ಕುರಿತು ಉಳಿದ ವಿವರಗಳನ್ನು ಹಂತಹಂತವಾಗಿ ನೀಡುತ್ತೇವೆ. ಸದ್ಯ ಚಿತ್ರ ಪ್ರೀಪ್ರೊಡಕ್ಷನ್ ಹಂತದಲ್ಲಿದೆ’ ಎಂದಿದೆ ಚಿತ್ರತಂಡ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.