ADVERTISEMENT

‘ಹೇಳು ಗೆಳತಿ’ಯಲ್ಲಿ ಹಳೆ ಕಾಲದ ನೆನಪು

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 23:45 IST
Last Updated 28 ಜುಲೈ 2024, 23:45 IST
   

ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ‘ಹೇಳು ಗೆಳತಿ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ‘ಪಂಚತಂತ್ರ’ ಚಿತ್ರದ ಮೂಲಕ ಗಮನ ಸೆಳೆದಿದ್ದ ವಿಹಾನ್‌ಗೆ ಅಂಕಿತ ಅಮರ್ ಜೋಡಿಯಾಗಿದ್ದಾರೆ.

ವೀಕ್ಷಕರನ್ನು 20 ವರ್ಷಗಳ ಹಿಂದಕ್ಕೆ ಕರೆದೊಯ್ಯುವ ಈ ಹಾಡಿನ ದೃಶ್ಯಗಳು ಗಮನಸೆಳೆಯುವಂತಿವೆ. ಗಗನ್ ಬಡೇರಿಯಾ ಅವರು ಸಂಗೀತ ಸಂಯೋಜಿಸಿರುವ ಈ ಗೀತೆಗೆ ಮತ್ತೋರ್ವ ಸಂಗೀತ ನಿರ್ದೇಶಕ ಚರಣ್‌ ರಾಜ್‌ ಗಾಯನವಿದೆ. ನಾಗಾರ್ಜುನ್‌ ಶರ್ಮಾ ಬರೆದಿರುವ ‘ಹಲವಾರಿದೆ ಬಣ್ಣ ನೆನಪೊಳಗೆ’ ಎಂಬ ಸಾಹಿತ್ಯ ನಾಯಕ ಮತ್ತು ನಾಯಕಿಯ ಸುಮಧುರ ಪ್ರೇಮವನ್ನು ಕಟ್ಟಿಕೊಡುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಚಿತ್ರಗ್ರಹಣವಿದೆ. 

‘ಕಿರಿಕ್ ಪಾರ್ಟಿ’ ಹಾಗೂ ‘ಅವನೇ ಶ್ರೀಮನ್ನಾರಾಯಣ’ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ತೆಲುಗಿನ ಸೂಪರ್ ಹಿಟ್ ‘ಗೀತಾಂಜಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ಅಭಿನಯಕ್ಕೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.