ಭಾರತೀಯ ಚಿತ್ರೋದ್ಯಮದಲ್ಲಿ ಪ್ರತೀ ವರ್ಷ ಅನೇಕ ಸಿನಿಮಾಗಳು ಬಿಡುಗಡೆಯಾಗುತ್ತವೆ. ಅದರಲ್ಲಿ, ಕೆಲವು ಸಿನಿಮಾಗಳು ಅತ್ಯಧಿಕ ಗಳಿಕೆ ಕಂಡು ದಾಖಲೆ ಬರೆದಿವೆ. ಅದರಂತೆ ಅತೀ ಹೆಚ್ಚು ಗಳಿಕೆ ಕಂಡ ಭಾರತದ ಅಗ್ರ 10 ಸಿನಿಮಾಗಳ ಪಟ್ಟಿ ಇಲ್ಲಿವೆ.
ಬಾಕ್ಸ್ ಆಫೀಸ್ ಟ್ರ್ಯಾಕಿಂಗ್ ಸ್ಯಾಕ್‌ನಿಕ್ ವೆಬ್‌ಸೈಟ್ ಬಿಡುಗಡೆ ಮಾಡಿರುವ ವರದಿ ಪ್ರಕಾರ, ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಿಡುಗಡೆಯಾದ 17 ದಿನದಲ್ಲಿ ₹560 ಕೋಟಿಗೂ ಅಧಿಕ ಗಳಿಸುವ ಮೂಲಕ ಅತಿ ಹೆಚ್ಚು ಗಳಿಕೆ ಕಂಡ ಭಾರತ 10ನೇ ಸಿನಿಮಾವಾಗಿ ಹೊರಹೊಮ್ಮಿದೆ.
ಈ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ₹1,234 ಕೋಟಿ ಗಳಿಸುವ ಮೂಲಕ ಅಗ್ರಸ್ಥಾನದಲ್ಲಿ, ನಟ ಪ್ರಭಾಸ್ ಅವರ ‘ಬಾಹುಬಲಿ 2’ ಚಿತ್ರ ₹1,030 ಕೋಟಿ ಗಳಿಸಿ ಎರಡನೇ ಸ್ಥಾನದಲ್ಲಿದೆ.
ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕೆಜಿಎಫ್ ಅಧ್ಯಾಯ 2’, ರಾಮ್ ಚರಣ್ ಹಾಗೂ ಜೂನಿಯರ್ ಎನ್.ಟಿ.ಆರ್ ಅವರ 'ಆರ್‌ಆರ್‌ಆರ್' ಹಾಗೂ ರಿಷಬ್ ಶೆಟ್ಟಿ ಅವರ ‘ಕಾಂತಾರ ಅಧ್ಯಾಯ-1’ ಈ ಪಟ್ಟಿಯಲ್ಲಿವೆ.
ಇನ್ನು ಉಳಿದಂತೆ ‘ಕಲ್ಕಿ 2898 ಎಡಿ’, ಶಾರುಖ್ ಖಾನ್ ನಟನೆ ‘ಜವಾನ್’, ನಟ ವಿಕ್ಕಿ ಕೌಶಲ್ ಅವರ ‘ಛಾವಾ’, 'ಅನಿಮಲ್' ಈ ಚಿತ್ರಗಳು ಗಲ್ಲಾ ಪೆಟ್ಟಿಗೆಯಲ್ಲಿ ಅಧಿಕ ಗಳಿಕೆ ಮಾಡಿಕೊಂಡಿವೆ ಎಂದು ಬಾಕ್ಸ್ ಆಫೀಸ್ ಟ್ರ್ಯಾಕಿಂಗ್ ವೆಬ್‌ಸೈಟ್ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.