ADVERTISEMENT

‘ಹೋಮ್‌ ಮಿನಿಸ್ಟರ್‌’ ಏಪ್ರಿಲ್‌ 1ಕ್ಕೆ ತೆರೆಗೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 12:59 IST
Last Updated 4 ಮಾರ್ಚ್ 2022, 12:59 IST
ಉಪೇಂದ್ರ, ವೇದಿಕಾ
ಉಪೇಂದ್ರ, ವೇದಿಕಾ   

ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ ‘ಹೋಮ್ ಮಿನಿಸ್ಟರ್’ ಚಿತ್ರ ಏಪ್ರಿಲ್‌‌ 1ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಅವರು ಉಪೇಂದ್ರ ಬಿಡುಗಡೆ ದಿನಾಂಕದ ಪೋಸ್ಟರನ್ನು ಅನಾವರಣಗೊಳಿಸಿದರು.

‘ಇದು ನಾನು ಈವರೆಗೂ ಮಾಡಿರದ ಪಾತ್ರ. ಇಲ್ಲಿನ ನಿರ್ಮಾಪಕರು ‌ಬೇರೆ ಕಡೆ ಹೋಗಿ ಚಿತ್ರ ನಿರ್ಮಾಣ ಮಾಡುತ್ತಾರೆ. ಆದರೆ ತೆಲುಗಿನ ನಿರ್ಮಾಪಕರು ಕನ್ನಡದ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.‌ ಇನ್ನೂ ನೂರು ಜನ ತೆಲುಗಿನ ನಿರ್ಮಾಪಕರು ಬಂದು ಕನ್ನಡ ಚಿತ್ರ ನಿರ್ಮಾಣ ಮಾಡಬೇಕು. ಆ ರೀತಿಯಲ್ಲಿ ‘ಹೋಂ ಮಿನಿಸ್ಟರ್’ ಚಿತ್ರವನ್ನು ಯಶಸ್ವಿ ಮಾಮಡೋಣ ಎಂದು ತಿಳಿಸಿದ ನಾಯಕ ಉಪೇಂದ್ರ ನಾಯಕಿ ವೇದಿಕಾ ಅವರ ಅಭಿನಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ADVERTISEMENT

‘ನನಗೆ ಬಹಳ ದಿನಗಳ ನಂತರ ನಿಮ್ಮ ಮುಂದೆ ಮಾತನಾಡಲು ಖುಷಿಯಾಗುತ್ತಿದೆ. ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ನಟಿಸಿದ್ದು, ಹೆಚ್ಚಿನ ಖುಷಿ ತಂದಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನಾನು ಜರ್ನಲಿಸ್ಟ್ ಪಾತ್ರ ಮಾಡಿದ್ದೇನೆ’ ಎಂದರು ವೇದಿಕ.

ನಿರ್ಮಾಪಕರಾದ ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್ ವೀರಮಾಚನೇನಿ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.

ಕರ್ನಾಟಕದಾದ್ಯಂತ ಸುಮಾರು 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಹೋಮ್ ಮಿನಿಸ್ಟರ್’
ಚಿತ್ರವನ್ನು ಶ್ರೇಯಾ ಚಿತ್ರ ಮೂಲಕ ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿರುವುದಾಗಿ ಬೆಂಗಳೂರು ಕುಮಾರ್ ತಿಳಿಸಿದರು.

ಸುಜಯ್ ಕೆ ಶ್ರೀಹರಿ ನಿರ್ದೇಶನದ ಈ ಚಿತ್ರಕ್ಕೆ ಜಿಬ್ರಾನ್ ಸಂಗೀತ ನೀಡಿದ್ದಾರೆ. ಕುಂಟುನಿ ಎಸ್ ಕುಮಾರ್ ಛಾಯಾಗ್ರಹಣ ಹಾಗೂ ಅಂಟೋನಿ ಅವರ ಸಂಕಲನ ಈ ಚಿತ್ರಕ್ಕಿದೆ.

ವೇದಿಕ, ಸುಮನ್ ರಂಗನಾಥ್, ತಾನ್ಯ ಹೋಪ್, ಸಾಧುಕೋಕಿಲ, ಅವಿನಾಶ್, ಮಾಳವಿಕ ಅವಿನಾಶ್, ತಿಲಕರು, ಲಾಸ್ಯ, ಸುಧಾ ಬೆಳವಾಡಿ, ಶ್ರೀನಿವಾಸ ಮೂರ್ತಿ, ವಿಜಯ್ ಚಂಡೂರ್, ಬೇಬಿ ಆದ್ಯ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.