ADVERTISEMENT

'ಹೋಪ್' ಸಿನಿಮಾ ಮೇಲೆ ಹೆಚ್ಚಾಯ್ತು ನಿರೀಕ್ಷೆ: ಟ್ರೈಲರ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 6:12 IST
Last Updated 26 ಜೂನ್ 2022, 6:12 IST
ಪೋಸ್ಟರ್‌
ಪೋಸ್ಟರ್‌   

ಚಂದನವನದಲ್ಲಿ 'ಹೋಪ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಪೋಸ್ಟರ್‌ಗಳು, ಟೀಸರ್‌ಗಳ ಮೂಲಕ ಸಿನಿಮಾ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದೆ. ಟ್ರೈಲರ್‌ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಕಂಡಿದೆ.

ಸಿನಿಮಾರಂಗದಿಂದ ಕೆಲವು ವರ್ಷಗಳ ಕಾಲಗ್ಯಾಪ್ ತೆಗೆದುಕೊಂಡಿದ್ದ ಶ್ವೇತಾ ಶ್ರೀವಾಸ್ತವ್ ಹೋಪ್ ಸಿನಿಮಾ ಮೂಲಕ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಸಿನಿಮಾದಲ್ಲಿ ಅವರು ಕೆಎಎಸ್ ಅಧಿಕಾರಿಯಾಗಿ ನಟಿಸಿದ್ದಾರೆ. ರಾಜಕೀಯ ಒತ್ತಡದಿಂದ ವರ್ಗಾವಣೆ ಹೇಗೆಲ್ಲಾ ನಡೆಯುತ್ತಿದೆ ಎಂಬುದೇ ಸಿನಿಮಾದ ಸಾರಾಂಶ.

ADVERTISEMENT

ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್, ಹೋಪ್ ಸಿನಿಮಾಗೆ ಕಥೆ ಬರೆದು ನಿರ್ಮಾಣಮಾಡಿದ್ದಾರೆ. ಈ ಹಿಂದೆ 'ಜ್ವಲಂತ' ಸಿನಿಮಾ ನಿರ್ದೇಶಿಸಿದ ಅಂಬರೀಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಎಸ್.ಹಲ್ಲೇಶ್ ಕ್ಯಾಮರಾ, ರಿತ್ವಿಕ್ ಮುರಳೀಧರ್ ಸಂಗೀತ ನೀಡಿದ್ದಾರೆ.

ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ, ಗೋಪಾಲ ಪಾಂಡೆ, ಪ್ರಕಾಶ್ ಬೆಳವಾಡಿ, ಸಿರಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾಜುಲೈ 8ರಂದು ಬಿಡುಗಡೆ ಆಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.