ಕಳೆದೊಂದು ವರ್ಷದಿಂದ ‘ಹಾಸ್ಟೆಲ್ ಹುಡುಗರು ಎಲ್ಲಿದ್ದಾರೆ’ ಎಂಬ ಪ್ರಶ್ನೆಯನ್ನು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡಕ್ಕೆ ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳುತ್ತಲೇ ಇದ್ದರು. ಈ ಪ್ರಶ್ನೆಗೆ ಕೊನೆಗೂ ಚಿತ್ರತಂಡ ಉತ್ತರಿಸಿದೆ. ಟೀಸರ್‌ಗಳು, ಹಾಡಿನ ಮೂಲಕ ನಿರೀಕ್ಷೆ ಹುಟ್ಟಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಜುಲೈ 21ಕ್ಕೆ ಸಿನಿಮಾ ತೆರೆಗೆ ಬರಲಿದೆ.
ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಈ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೊಹರ್ ಫಿಲಂಸ್ ಬ್ಯಾನರ್‌ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ. ಕಶ್ಯಪ್ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ‘ಪ್ರೊಟೆಸ್ಟ್’ ಹಾಡು ಯೂಟ್ಯೂಬ್‌ನಲ್ಲಿ 2.5 ಮಿಲಿಯನ್ ವೀಕ್ಷಣೆ ಕಂಡಿದೆ. ಅರವಿಂದ್ ಅವರ ಛಾಯಾಚಿತ್ರಗ್ರಹಣ ಚಿತ್ರದ ಪ್ಲಸ್ ಪಾಯಿಂಟ್ ಎಂದಿದೆ ಚಿತ್ರತಂಡ. ಬಿಡುಗಡೆ ದಿನಾಂಕ ಘೋಷಿಸಿರುವ ಚಿತ್ರತಂಡ ಶೀಘ್ರದಲ್ಲಿಯೇ ಟ್ರೈಲರ್ ಬಿಡುಗಡೆ ಮಾಡುವುದಾಗಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.