ADVERTISEMENT

ಕನ್ನಡದಲ್ಲಿ ಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತೆಲುಗಿಗೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2023, 23:32 IST
Last Updated 14 ಆಗಸ್ಟ್ 2023, 23:32 IST
ಪೋಸ್ಟರ್‌ 
ಪೋಸ್ಟರ್‌    

ನಿತಿನ್‌ ಕೃಷ್ಣಮೂರ್ತಿ ನಿರ್ದೇಶನದ ‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲೇ ಸಿನಿಮಾ ಹೊರ ರಾಜ್ಯಕ್ಕೆ ಕಾಲಿಡಲು ಸಜ್ಜಾಗಿದೆ. 

ಕನ್ನಡದಲ್ಲಿ ಗೆದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ತೆಲುಗಿಗೆ ‘ಬಾಯ್ಸ್ ಹಾಸ್ಟೆಲ್’ ಎಂಬ ಹೆಸರಿನಲ್ಲಿ ಡಬ್‌ ಆಗುತ್ತಿದ್ದು, ಸಿನಿಮಾ ಇದೇ 26ಕ್ಕೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ರಿಲೀಸ್ ಆಗಲಿದೆ. ಚಿತ್ರ ನಿರ್ಮಾಣ ಸಂಸ್ಥೆಗಳಾದ ಅನ್ನಪೂರ್ಣ ಸ್ಟುಡಿಯೋಸ್‌ ಹಾಗೂ ಚಾಯ್‌ಬಿಸ್ಕೆಟ್‌ ಫಿಲ್ಮ್ಸ್‌ ಸಹಯೋಗದಲ್ಲಿ ಸುಮಾರು 150 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ‘ಸದ್ಯ ಡಬ್ಬಿಂಗ್‌ ಕೆಲಸಗಳು ನಡೆಯುತ್ತಿವೆ. ಕನ್ನಡದಲ್ಲಿ ನಟಿಸಿರುವ ನಾಲ್ಕೈದು ಕಲಾವಿದರಷ್ಟೇ ತಮ್ಮ ಪಾತ್ರಗಳಿಗೆ ತಾವೇ ತೆಲುಗಿನಲ್ಲೂ ಡಬ್‌ ಮಾಡಿದ್ದಾರೆ. ಒಂದೆರಡು ದಿನಗಳಲ್ಲಿ ತೆಲುಗಿನಲ್ಲಿ ಸಿದ್ಧವಾದ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಿಡುಗಡೆಯಾಗಲಿದೆ’ ಎಂದಿದ್ದಾರೆ ನಿರ್ಮಾಪಕ ವರುಣ್‌ ಗೌಡ..

ಕನ್ನಡದಲ್ಲಿ ಈ ಸಿನಿಮಾವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಪರಂವಃ ಪಿಕ್ಚರ್ಸ್ ಬ್ಯಾನರ್‌ನಡಿ ಪ್ರಸ್ತುತಿ ಪಡಿಸಿದ್ದರು.  ತಂಡಕ್ಕೆ ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ಇನ್ನಿತರರು ಸಾಥ್ ಕೊಟ್ಟಿದ್ದರು. ಹೀಗಾಗಿ ಪ್ಯಾನ್‌ ಇಂಡಿಯಾ ಮಟ್ಟದಲ್ಲೂ ಚಿತ್ರ ಸದ್ದು ಮಾಡಿದೆ. ಗುಲ್ಮೋಹರ್‌ ಫಿಲ್ಮ್ಸ್‌ಮತ್ತು ವರುಣ್ ಸ್ಟುಡಿಯೋಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.