ADVERTISEMENT

ಧನಂಜಯ್‌ ನಟನೆಯ ಹೊಯ್ಸಳ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 10:20 IST
Last Updated 7 ಸೆಪ್ಟೆಂಬರ್ 2022, 10:20 IST
   

‘ಮಾನ್ಸೂನ್‌ ರಾಗ’, ‘ತೋತಾಪುರಿ’, ‘ಹೆಡ್‌ಬುಷ್‌’ ಹೀಗೆ ಸಾಲು ಸಾಲು ಚಿತ್ರಗಳ ಬಿಡುಗಡೆಗೆ ಎದುರುನೋಡುತ್ತಿರುವ ನಟ ‘ಡಾಲಿ’ ಧನಂಜಯ್‌, ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಅತಿ ಹೆಚ್ಚು ಸಿನಿಮಾ ಬ್ಯಾಂಕ್‌ ಹೊಂದಿರುವ ನಟರಲ್ಲಿ ಮುಂಚೂಣಿಯಲ್ಲಿದ್ದಾರೆ.

ಧನಂಜಯ್‌ ನಟನೆಯ 25ನೇ ಸಿನಿಮಾ ‘ಹೊಯ್ಸಳ’ದ ಚಿತ್ರೀಕರಣ ಅಂತಿಮ ಹಂತದಲ್ಲಿದ್ದು, ಇದೇ ಸಂದರ್ಭದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನೂ ಘೋಷಿಸಿದೆ. 2023ರ ಮಾರ್ಚ್‌ 30ರಂದು ಸಿನಿಮಾ ತೆರೆಗೆ ಬರಲಿದೆ ಎಂದು ಕೆಆರ್‌ಜಿ ಸ್ಟೂಡಿಯೋಸ್‌ ಬುಧವಾರ ತಿಳಿಸಿದೆ.

ಧನಂಜಯ್‌, ಈ ಚಿತ್ರದಲ್ಲಿ ‘ಗುರುದೇವ ಹೊಯ್ಸಳ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.ಬೆಳಗಾವಿಯಲ್ಲಿ ನಡೆಯುವ ಒಬ್ಬ ದಿಟ್ಟ ಪೊಲೀಸ್ ಅಧಿಕಾರಿಯ ಸುತ್ತ ನಡೆದಿರುವ ಘಟನೆಯನ್ನು ಆಧರಿಸಿ ಹೆಣೆದಿರುವ ಕಥೆ ಇದಾಗಿದ್ದು, ಬಹುಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ADVERTISEMENT

ಚಿತ್ರಕ್ಕೆ ವಿಜಯ್ ನಾಗೇಂದ್ರ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಈ ಹಿಂದೆ ಗಣೇಶ್ ಅಭಿನಯದ ‘ಗೀತಾ’ ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶನ ಮಾಡಿದ್ದರು. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಅಮೃತ ಅಯ್ಯಂಗಾರ್, ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರಿದ್ದಾರೆ.

ಲಿಂಕ್‌:

https://twitter.com/Dhananjayaka/status/1567418845509591041/photo/1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.