ADVERTISEMENT

Sandalwood: ‘ಐ ಆ್ಯಮ್‌ ಗಾಡ್‌’ನಲ್ಲಿ ದಿಗಂತ್‌–ನಿವೇದಿತಾ ಹೆಜ್ಜೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 1:30 IST
Last Updated 18 ಅಕ್ಟೋಬರ್ 2025, 1:30 IST
<div class="paragraphs"><p>ನಿವೇದಿತಾ, ದಿಗಂತ್‌&nbsp;</p></div>

ನಿವೇದಿತಾ, ದಿಗಂತ್‌ 

   

‘ಐ ಆ್ಯಮ್‌ ಗಾಡ್‌’ ಹೆಸರಿನ ಚಿತ್ರವೊಂದು ಬಿಡುಗಡೆಗೆ ಸಜ್ಜಾಗಿದೆ. ನಟ ಉಪೇಂದ್ರ ಅವರ ಜೊತೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ರವಿ ಗೌಡ ನಾಯಕನಾಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅವರೇ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. 

ಈ ಸಿನಿಮಾದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ನಟ ದಿಗಂತ್ ಮತ್ತು ಬಿಗ್‌ಬಾಸ್ ಖ್ಯಾತಿಯ ನಟಿ ನಿವೇದಿತಾ ಗೌಡ ಹೆಜ್ಜೆ ಹಾಕಿದ್ದಾರೆ. ವಿಭಿನ್ನವಾದ ಸಾಹಿತ್ಯವಿರುವ ಈ ಹಾಡು ಗಮನ ಸೆಳೆಯುತ್ತಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಹಾಡಿಗೆ ರವಿ ಗೌಡ ಅವರೇ ಸಾಹಿತ್ಯ ರಚಿಸಿದ್ದಾರೆ. ಶಶಾಂಕ್ ಶೇಷಗಿರಿ, ಅನಿರುದ್ಧ ಶಾಸ್ತ್ರಿ ಮತ್ತು ಐಶ್ವರ್ಯ ರಂಗರಾಜನ್ ದನಿಯಲ್ಲಿ ಈ ಹಾಡು ಮೂಡಿಬಂದಿದೆ. 

ADVERTISEMENT

ಈ ಸಿನಿಮಾ ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ನವೆಂಬರ್ 7ರಂದು ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ರವಿ ಗೌಡಗೆ ಜೋಡಿಯಾಗಿ ವಿತೇಜಾ ಪರೀಕ್ ನಟಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾ. ಚಿತ್ರದಲ್ಲಿ ರವಿಶಂಕರ್, ಅವಿನಾಶ್, ಅರುಣ ಬಾಲರಾಜ್ ಸೇರಿದಂತೆ ಅನೇಕ ಕಲಾವಿದರಿದ್ದಾರೆ.