ದಿಲ್ ರಾಜು
(ಚಿತ್ರ ಕೃಪೆ–X)
ಹೈದರಾಬಾದ್: ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ (FDC) ಅಧ್ಯಕ್ಷ ಹಾಗೂ ನಿರ್ಮಾಪಕ ದಿಲ್ ರಾಜು ಹಾಗೂ ಇತರರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಮಂಗಳವಾರ) ಶೋಧ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಜುಬಿಲಿ ಹಿಲ್ಸ್ ಮತ್ತು ಬಂಜಾರಾ ಹಿಲ್ಸ್ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ದಿಲ್ ರಾಜು ಅವರು, ಇತ್ತೀಚೆಗೆ ತೆರೆಕಂಡ, ರಾಮ್ ಚರಣ್ ಅಭಿನಯದ 'ಗೇಮ್ ಚೇಂಜರ್' ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.