ADVERTISEMENT

ಸೌಜನ್ಯಾಗೆ ನ್ಯಾಯ ಸಿಗೋವರೆಗೂ ಮಂಜುನಾಥ ದರ್ಶನ ಮಾಡಬಾರದೆನಿಸುತ್ತೆ: ದುನಿಯಾ ವಿಜಯ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಆಗಸ್ಟ್ 2023, 7:27 IST
Last Updated 1 ಆಗಸ್ಟ್ 2023, 7:27 IST
ದುನಿಯಾ ವಿಜಯ್
ದುನಿಯಾ ವಿಜಯ್   

ಬೆಂಗಳೂರು: ಸೌಜನ್ಯಾ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಕನ್ನಡದ ನಟ ದುನಿಯಾ ವಿಜಯ್‌ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು. ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ, ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು ಎಂದು ಭಗವಾನ್‌ ಬುದ್ಧನ ಹೇಳಿಕೆಯನ್ನೂ ಉಲ್ಲೇಖಿಸಿದ್ದಾರೆ. #Justiceforsoujanya ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.