ADVERTISEMENT

12ನೇ ವರ್ಷದ ವಿವಾಹ ವಾರ್ಷಿಕೋತ್ಸವ: ಭರವಸೆಯೇ ಜೀವನ –ಶಿಲ್ಪಾ ಶೆಟ್ಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ನವೆಂಬರ್ 2021, 6:13 IST
Last Updated 22 ನವೆಂಬರ್ 2021, 6:13 IST
ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ   

ಮುಂಬೈ: ಬದ್ಧತೆ, ನಂಬಿಕೆ ಹಾಗೂ ಭರವಸೆಗಳ ಮೂಲಕ ನಮ್ಮ ವೈವಾಹಿಕ ಜೀವನ ಸಾಗುತ್ತಿದೆ ಎಂದು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದ್ದಾರೆ.

12ನೇ ವರ್ಷದ ವಿವಾಹ ವಾರ್ಷಿಕ ಸಂದರ್ಭದಲ್ಲಿ ಶಿಲ್ಪಾ ಶೆಟ್ಟಿ ಅವರು ಉದ್ಯಮಿ ರಾಜ್ ಕುಂದ್ರಾ ಅವರೊಂದಿಗಿನ ವಿವಾಹದ ಫೋಟೊಗಳನ್ನು ಶೇರ್‌ ಮಾಡಿದ್ದಾರೆ. 12 ವರ್ಷಗಳ ಹಿಂದೆ ಶಿಲ್ಪಾ ಶೆಟ್ಟಿ ಅವರು ರಾಜ್‌ ಕುಂದ್ರಾ ಅವರನ್ನು ಮದುವೆಯಾಗಿದ್ದರು.

ಇದೇ ವೇಳೆ, ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ರಾಜ್‌ ಕುಂದ್ರಾ ಜೈಲಿಗೆ ಹೋದ ಸಂದರ್ಭದಲ್ಲಿ ನಮ್ಮ ಇಡೀ ಕುಟುಂಬವನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ADVERTISEMENT

ನಮ್ಮ ಮಕ್ಕಳೊಂದಿಗೆ ಭರವಸೆಯ ದಿನಗಳನ್ನು ನಾವು ಕಳೆಯುತ್ತೇವೆ. ಕವಿದ ಕಾರ್ಮೋಡ ಸರಿದು ಕಾಮನಬಿಲ್ಲು ಮೂಡಲಿದೆ ಎಂದು ಶಿಲ್ಪಾ ಶೆಟ್ಟಿ ಅವರು ಖಾಸಗಿ ಸುದ್ದಿವಾನಿಯ ಜೊತೆಗೆ ಭರವಸೆಯ ಮಾತುಗಳನ್ನು ಆಡಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಅವರನ್ನು ಜುಲೈ 19ರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಕುಂದ್ರಾ ವಿರುದ್ಧ ಮುಂಬೈ ಪೊಲೀಸರು 1,500 ಪುಟಗಳಚಾರ್ಜ್‌ಶೀಟ್‌ಸಲ್ಲಿಸಿದ್ದರು. ರಾಜ್‌ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ₹ 50 ಸಾವಿರ ಜೊತೆಗೆ ಜಾಮೀನು ಮಂಜೂರು ಮಾಡಿದೆ.

ಸದ್ಯ ಅವರು ಕುಟುಂಬದ ಜೊತೆ ವಾಸವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.