ADVERTISEMENT

ಸ್ನೇಹಿತನ ಬ್ಲಾಕ್ ಬಸ್ಟರ್ ಮೂವಿ ಬರ್ತಿದೆ ಸಿದ್ಧರಾಗಿ: ಸುದೀಪ್‌ಗೆ ಸೆಹ್ವಾಗ್ ವಿಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಏಪ್ರಿಲ್ 2022, 11:19 IST
Last Updated 2 ಏಪ್ರಿಲ್ 2022, 11:19 IST
ವೀರೇಂದ್ರ ಸೆಹ್ವಾಗ್ ಮತ್ತು ಕಿಚ್ಚ ಸುದೀಪ್
ವೀರೇಂದ್ರ ಸೆಹ್ವಾಗ್ ಮತ್ತು ಕಿಚ್ಚ ಸುದೀಪ್   

ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾದ ಟೀಸರ್ ಇಂದು (ಶನಿವಾರ) ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಚಿತ್ರದ ಬಗೆಗಿನ ಕುತೂಹಲವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಮತ್ತು ಇಂಗ್ಲಿಷ್‌ನಲ್ಲಿಯೂ ಈ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್ ಲಾಲ್, ಹಿಂದಿಯಲ್ಲಿ ಸಲ್ಮಾನ್ ಖಾನ್, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಇಂಗ್ಲಿಷ್‌ನಲ್ಲಿ ವೀರೇಂದ್ರ ಸೆಹ್ವಾಗ್ ಅವರು ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸೆಹ್ವಾಗ್‌, ‘ಬ್ಲಾಕ್‌ ಬಸ್ಟರ್‌ ಆ ರಹಾ ಹೈ. ವ್ಹಾಹ್ ವಿಕ್ರಾಂತ್ ರೋಣ ವ್ಹಾಹ್! ಎಲ್ಲರೂ ಸಿದ್ಧರಾಗಿ, ನನ್ನ ಗೆಳೆಯ ಸುದೀಪ್ ಅವರ ಅದ್ಭುತ ವರ್ಚಸ್ಸು. ಜುಲೈ 28ರಂದು ವಿಶ್ವದಾದ್ಯಂತ 3ಡಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಶಾಲಿನಿ ಮಂಜುನಾಥ್ ಮತ್ತು ಅಲಂಕಾರ್ ಪಾಂಡಿಯನ್ ಅವರು ಚಿತ್ರದ ನಿರ್ಮಾಪಕರು. ಅನೂಪ್‌ ಭಂಡಾರಿ ನಿರ್ದೇಶನವಿದೆ. ಕಿಚ್ಚ ಸುದೀಪ್ ಜೊತೆ ನೀತಾ ಅಶೋಕ್, ನಿರೂಪ್ ಭಂಡಾರಿ, ಜಾಕ್ವೆಲಿನ್ ಫೆರ್ನಾಂಡಿಸ್‌ ನಟಿಸಿದ್ದಾರೆ. ದುಬೈನ ಬುರ್ಜ್‌ ಖಲೀಫಾ ಕಟ್ಟಡದ ಮೇಲೆ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಲಾಗಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.